UPSC ನೇಮಕಾತಿ 2020: 345 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಅ.29: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. 345 ಸಿಡಿಎಸ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ನವೆಂಬರ್ 17ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Combined Defence Service (CDS)
ಒಟ್ಟು ಹುದ್ದೆ: 345
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17.11.2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ

ವಯೋಮಿತಿ: ಕೇಂದ್ರ ಲೋಕಸೇವಾ ಆಯೋಗ ನಿಯಮಾವಳಿ ಅನುಸಾರ
ಅರ್ಜಿಶುಲ್ಕ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 28.10.2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17.11.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications