ಯುಪಿಎಸ್‌ಸಿ ನೇಮಕಾತಿ; 418 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಜನವರಿ 09 : ಕೇಂದ್ರ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/1/2020 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ 418 ಎನ್‌ಡಿಯ& ಎನ್‌ಎ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವವರು ಅವಿವಾಹಿತರಾಗಿರಬೇಕು. 2 ಜುಲೈ, 2001ರಿಂದ 1ಜುಲೈ 2004ರೊಳಗೆ ಜನಿಸಿರಬೇಕು.

ಅಭ್ಯರ್ಥಿಗಳನ್ನು ಎಸ್‌ಎಸ್‌ಬಿ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಪ್ರಮುಖ ಮಾಹಿತಿ
* ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ
* 418 ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ
* 28/1/2020 ಅರ್ಜಿ ಸಲ್ಲಿಕೆಗೆ ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications