ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

886 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 14 : ಕೇಂದ್ರ ಲೋಕಸೇವಾ ಆಯೋಗ ಐಎಎಸ್ ಮತ್ತು ಐಎಫ್‌ಎಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 3/3/2020 ಕೊನೆಯ ದಿನವಾಗಿದೆ.

ಒಟ್ಟು 886 ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಕಂಡಕ್ಟರ್ ಐಎಎಸ್ ಪಾಸ್; ಸುಳ್ಳು ಸುದ್ದಿ ಸ್ಫೂರ್ತಿ ತುಂಬಿದ ಕಥೆ ಕಂಡಕ್ಟರ್ ಐಎಎಸ್ ಪಾಸ್; ಸುಳ್ಳು ಸುದ್ದಿ ಸ್ಫೂರ್ತಿ ತುಂಬಿದ ಕಥೆ

ಐಎಎಸ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ಯಾವುದಾದರೂ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಕೆಪಿಎಸ್‌ಸಿ ನೇಮಕಾತಿ; 925 ಹುದ್ದೆಗಳ ಭರ್ತಿ ಕೆಪಿಎಸ್‌ಸಿ ನೇಮಕಾತಿ; 925 ಹುದ್ದೆಗಳ ಭರ್ತಿ

UPSC Recruitment 2020 Apply For 886 IAS And IFS Vacancies

ಐಎಫ್‌ಎಸ್ ಹುದ್ದೆಗೆ ಅರ್ಜಿ ಹಾಕುವವರು ಪಶುಸಂಗೋಪನೆ, ವೆರ್ಟನರಿ ಸೈನ್ಸ್, ಬಾಟ್ನಿ, ಕೆಮಿಸ್ಟ್ರಿ, ಜಿಯಾಲಜಿ, ಗಣಿತ, ಫಿಸಿಕ್ಸ್, ಸ್ಟ್ಯಾಟಿಟಿಕ್ಸ್, ಕೃಷಿ ಅಥವ ತತ್ಸಮಾನ ಪದವಿಯನ್ನು ಹೊಂದಿರಬೇಕು.

ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 21 ವರ್ಷಗಳು. 32 ವರ್ಷದ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಕಟ್ಟಬೇಕು.

ಆಸಕ್ತ ಅಭ್ಯರ್ಥಿಗಳು 12/2/2020 ರಿಂದ 3/3/2020ರ ತನಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Union Public Service Commission (UPSC) recruitment 2020. Notification has been released on official website for the recruitment of 886 post. The candidate who is looking for IAS, IFS Vacancies can apply online application on or before 03-03-2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X