ಯುಪಿಎಸ್‌ಸಿಯಲ್ಲಿ 30 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮಾರ್ಚ್ 7: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ (ಗ್ರೂಪ್ ಎ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ನಿರ್ದೇಶಕ ಹುದ್ದೆಗಳ ನೇಮಕಾತಿಯ ಅರ್ಜಿ ಪ್ರಕ್ರಿಯೆಯು ಮಾರ್ಚ್ 22ರಂದು ಕೊನೆಗೊಳ್ಳಲಿದೆ. ಆಸಕ್ತಿ ಅಭ್ಯರ್ಥಿಗಳು upsc.gov.in ಅಥವಾ upsconline.nic.in ವೆಬ್‌ಸೈಟ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮೂರು ವರ್ಷಗಳ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದ್ದು, ಇದು 5 ವರ್ಷಗಳವರೆಗೂ ವಿಸ್ತರಣೆಗೆ ಒಳಪಡಬಹುದಾಗಿದೆ.
ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಹುದ್ದೆಗಳು, ವಾಣಿಜ್ಯ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ, ಹಣಕಾಸು ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಶೈಕ್ಷಣಿಕ ಅರ್ಹತೆ: ಹುದ್ದೆಗೆ ಅಗತ್ಯವಿರುವ ವಿಷಯದಲ್ಲಿ ಸ್ನಾತಕ ಪದವಿ ಹೊಂದಿರಬೇಕು. 10 ರಿಂದ 15 ವರ್ಷಗಳ ಉದ್ಯೋಗ ಅನುಭವ ಅಗತ್ಯವಾಗಿದೆ.
ವಯೋಮಿತಿ: ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 55 ವರ್ಷ. ನಿರ್ದೇಶಕರ ಹುದ್ದೆಗಳ ಗರಿಷ್ಠ ವಯೋಮಿತಿ 45 ವರ್ಷ.
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಆಧಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯ ಹೆಚ್ಚಿನ ವಿವರಗಳಿಗೆ upsc.gov.in ವೆಬ್‌ಸೈಟ್ ಸಂಪರ್ಕಿಸುವಂತೆ ಯುಪಿಎಸ್‌ಸಿ ಕೋರಿದೆ.












Click it and Unblock the Notifications