ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಎಸ್‌ಸಿಯಲ್ಲಿ 30 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಮಾರ್ಚ್ 7: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ (ಗ್ರೂಪ್ ಎ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ನಿರ್ದೇಶಕ ಹುದ್ದೆಗಳ ನೇಮಕಾತಿಯ ಅರ್ಜಿ ಪ್ರಕ್ರಿಯೆಯು ಮಾರ್ಚ್ 22ರಂದು ಕೊನೆಗೊಳ್ಳಲಿದೆ. ಆಸಕ್ತಿ ಅಭ್ಯರ್ಥಿಗಳು upsc.gov.in ಅಥವಾ upsconline.nic.in ವೆಬ್‌ಸೈಟ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮೂರು ವರ್ಷಗಳ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದ್ದು, ಇದು 5 ವರ್ಷಗಳವರೆಗೂ ವಿಸ್ತರಣೆಗೆ ಒಳಪಡಬಹುದಾಗಿದೆ.

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ 10 ಹುದ್ದೆಗಳಿಗೆ ಅರ್ಜಿ ಹಾಕಿಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ 10 ಹುದ್ದೆಗಳಿಗೆ ಅರ್ಜಿ ಹಾಕಿ

ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಹುದ್ದೆಗಳು, ವಾಣಿಜ್ಯ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ, ಹಣಕಾಸು ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

 UPSC Recruitment 2021: 30 Vacancies For Joint Secretary, Director Posts

ಶೈಕ್ಷಣಿಕ ಅರ್ಹತೆ: ಹುದ್ದೆಗೆ ಅಗತ್ಯವಿರುವ ವಿಷಯದಲ್ಲಿ ಸ್ನಾತಕ ಪದವಿ ಹೊಂದಿರಬೇಕು. 10 ರಿಂದ 15 ವರ್ಷಗಳ ಉದ್ಯೋಗ ಅನುಭವ ಅಗತ್ಯವಾಗಿದೆ.

ವಯೋಮಿತಿ: ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 55 ವರ್ಷ. ನಿರ್ದೇಶಕರ ಹುದ್ದೆಗಳ ಗರಿಷ್ಠ ವಯೋಮಿತಿ 45 ವರ್ಷ.

ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಸಂದರ್ಶನದ ಆಧಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯ ಹೆಚ್ಚಿನ ವಿವರಗಳಿಗೆ upsc.gov.in ವೆಬ್‌ಸೈಟ್ ಸಂಪರ್ಕಿಸುವಂತೆ ಯುಪಿಎಸ್‌ಸಿ ಕೋರಿದೆ.

English summary
UPSC recruitment 2021: UPSC has invited applications for joint secretary and director (Group A) posts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X