UPSC ನೇಮಕಾತಿ 2021: 159 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಏಪ್ರಿಲ್ 15: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು ಕೊರೊನಾ ಸಂಕಷ್ಟದ ನಡುವೆಯೂ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಶಸ್ತ್ರ ಪೊಲೀಸ್ ಪಡೆಯ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮೇ 05ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Central Armed Police Forces (Assistant Commandants)
ಒಟ್ಟು ಹುದ್ದೆ: 159
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 05, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ.

ವಯೋಮಿತಿ:
ಕನಿಷ್ಠ ವಯೋಮಿತಿ: 20 ವರ್ಷ
ಗರಿಷ್ಠ ವಯೋಮಿತಿ: 25 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ ಸಿ, ಎಸ್ಟಿ, ಮಾಜಿ ಯೋಧ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-04-2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-05-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications