UPSC Jobs 2024: ಕೇಂದ್ರ ಸರ್ಕಾರದ 48 ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ, ವಿವರ ತಿಳಿಯಿರಿ
ಬೆಂಗಳೂರು, ಏಪ್ರಿಲ್ 18: ಕೇಂದ್ರ ಲೋಕಸೇವಾ ಆಯೋಗ (UPSC) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕಿದೆ.
ಕೇಂದ್ರ ಲೋಕಸೇವಾ ಆಯೋಗ (UPSC) ತನ್ನಲ್ಲಿ ಖಾಲಿ ಇರುವ ಒಟ್ಟು 48 ಇಂಡಿಯನ್ ಎಕನಾಮಿಕ್ ಸರ್ವೀಸ್/ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವೀಸ್ ಎಕ್ಸಾಮಿನೇಶನ್ ಹುದ್ದೆಗಳಿಗೆ ಅರ್ಹರನ್ನು ನೇಮಕ ಮಾಡಿಕೊಳ್ಳಲು ಆಯೋಗ ಮುಂದಾಗಿದೆ. ಆಸಕ್ತು ಏಪ್ರಿಲ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಇದಕ್ಕು ಮೊದಲು ಇಲ್ಲಿ ನೀಡಲಾಗಿರುವ ವೇತನ, ಸಂಬಳ, ವಯೋಮಿತಿ ಶುಲ್ಕ, ಆಯ್ಕೆ ಪ್ರಕ್ರಿಯೆ ತಿಳಿಯಿರಿ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಯುಪಿಎಸ್‌ಸಿ
ಹುದ್ದೆ ಹೆಸರು: ಇಂಡಿಯನ್ ಎಕನಾಮಿಕ್ ಸರ್ವೀಸ್ & ಸ್ಟಾಟಿಸ್ಟಿಕಲ್ ಸರ್ವೀಸ್
ಹುದ್ದೆ ಎಷ್ಟು: 48
ಅರ್ಜಿ ಸಲ್ಲಿಕೆ ಕೊನೆ ದಿನ: ಏಪ್ರಿಲ್ 30
ಇಂಡಿಯನ್ ಎಕನಾಮಿಕ್ ಸರ್ವೀಸ್ - 18
ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವೀಸ್- 30
ಶೈಕ್ಷಣಿಕ ಅರ್ಹತೆ
ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯು, ಇಂಡಿಯನ್ ಎಕನಾಮಿಕ್ ಸರ್ವೀಸ್ - ಎಕನಾಮಿಕ್ಸ್/ ಅಪ್ಲೈಡ್ ಎಕನಾಮಿಕ್ಸ್/ ಬ್ಯುಸಿನೆಸ್ ಎಕನಾಮಿಕ್ಸ್/ ಎಕನಾಮೆಟ್ರಿಕ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿ,
ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವೀಸ್- ಸ್ಟಾಟಿಸ್ಟಿಕ್ಸ್/ಮ್ಯಾಥಮೆಟಿಕಲ್ ಸ್ಟಾಟಿಸ್ಟಿಕ್ಸ್/ ಅಪ್ಲೈಡ್ ಸ್ಟಾಟಿಸ್ಟಿಕ್ಸ್ ಪದವಿ ಪಡೆದಿರಬೇಕು ಎಂದು ತಿಳಿಸಿದೆ.
ವಯಸ್ಸಿನ ಮಿತಿ
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ 2024ರ ಆಗಸ್ಟ್ 1ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ಇನ್ನೂ ಜಾತಿಗೆ ಅನುಗುಣವಾಗಿ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ
ಎಸ್‌ಸಿ, ಎಸ್‌ಟಿ/ಮಹಿಳೆ/PwBD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಈ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಇತರೆ ಅಭ್ಯರ್ಥಿಗಳಿಗೆ ರೂ.200 ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಿದೆ.
ಆಯ್ಕೆ ಪ್ರಕ್ರಿಯೆ ಹೇಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುವುದು. ಅಲ್ಲಿ ಆಯ್ಕೆ ಆಗುವವರಿಗೆ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಆಯೋಗ ತಿಳಿಸಿದೆ. ಸದ್ಯ ಮಾಸಿಕ ವೇತನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ನಿಯಮಾನುಸಾರ ವೇತನ ಸಿಗಲಿದೆ. ಭಾರತದಲ್ಲಿ ಎಲ್ಲಿ ಬೇಕಾದರೂ ಅರ್ಹರಿಗೆ ಪೋಸ್ಟಿಂಗ್ ನೀಡಲಾಗುವುದು
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತು ಅಭ್ಯರ್ಥಿಗಳು ಕೊನೆ ದಿನಾಂಕವರೆಗೆ ಕಾಯದೇ ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ನೀಡುವ https://upsconline.nic.in/upsc/OTRP/ ಈ ಲಿಂಕ್ ಗೆ ಭೇಟಿ ಕೊಟ್ಟು ಅಗತ್ಯ ಮಾಹಿತಿ ನಮೂದಿಸಿ ಅರ್ಜಿಗಳನ್ನು ಸಲ್ಲಿಸಬೇಕು
ನೆನಪಿಡಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭ ದಿನ: 10 ಏಪ್ರಿಲ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಏಪ್ರಿಲ್ 2024
OTR ಮಾಡಿಫಿಕೇಶನ್ಗೆ ಕೊನೆಯ ದಿನ: 7 ಮೇ 2024
ಪರೀಕ್ಷೆ ದಿನಾಂಕ: ಜೂನ್ 21, 2024












Click it and Unblock the Notifications