ಉತ್ತರ ಕನ್ನಡದಲ್ಲಿ ಕೆಲಸ ಖಾಲಿ ಇದೆ; ಹುದ್ದೆ, ವೇತನ ವಿವರ
ಉತ್ತರ ಕನ್ನಡ, ಜೂನ್ 20: ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಕಾರವಾರ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 19/7/2024 ರಾತ್ರಿ 11.59.
ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಎಂಬ ವಿಷಯವನ್ನು ನೇಮಕಾತಿ ಅಧಿಸೂಚನೆ ಒಳಗೊಂಡಿದೆ.

ಒಟ್ಟು 3 ಬೆರಳಚ್ಚುಗಾರ (Typist) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 21,400-42,000 ರೂ. ಹಾಗೂ ಲಭ್ಯವಿರುವ ಇತರ ಭತ್ಯೆಗಳು.
ವಿದ್ಯಾರ್ಹತೆ ಮಾಹಿತಿ: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಮೂರು ವರ್ಷಗಳ ಡಿಪ್ಲೋಮಾ (Three years Diploma in Commercial Practice) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೋಮಾ (Diploma in Secretarial Practice) ಪರೀಕ್ಷೆಯಲ್ಲಿ ಉತ್ತಿರರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.
ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಗಣಕಯಂತ್ರದ (ಕಂಪ್ಯೂಟರ್) ಜ್ಞಾನ ಅವಶ್ಯಕವಾಗಿರುತ್ತದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಮೀರಿರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2ಎ, 3ಎ ಹಾಗೂ 3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕಾರ ಮಾಡಲಾಗುತ್ತದೆ. ಅರ್ಜಿ ಶುಲ್ಕ ಪಾವತಿ ಮಾಡಲು 20/7/2024 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 300 ರೂ., ಪ್ರವರ್ಗ 2ಎ, 2 ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 150 ರೂ.ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಮತ್ತು ತಿದ್ದುಪಡಿ ನಿಯಮಗಳು 2007 ಹಾಗೂ 2021ರ ಅನ್ವಯ ನಡೆಸಲಾಗುತ್ತದೆ.
ಅಭ್ಯರ್ಥಿಯು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಗಣಕಯಂತ್ರದಲ್ಲಿ (ಕಂಪ್ಯೂಟರ್) ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಶೇಕಡವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಲಾಗುವದು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು ಮತ್ತು ಸಂದರ್ಶನ 5 ಅಂಕಗಳನ್ನು ಒಳಗೊಂಡಿದ್ದು ಕನಿಷ್ಠ 2 ಅಂಕವನ್ನು ಪಡೆದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗುವದು.
ಆಸಕ್ತ ಮತ್ತು ಅರ್ಹರು ನೇಮಕಾತಿ ಅಧಿಸೂಚನೆ, ಅರ್ಜಿ ಸಲ್ಲಿಕೆ ಮಾಡಲು https://uttarakannada.dcourts.gov.in/online-recruitment ವೆಬ್ ಸೈಟ್‌ಗೆ ಭೇಟಿ ನೀಡಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications