ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕನ್ನಡದಲ್ಲಿ 30 ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

By Gururaj
|
Google Oneindia Kannada News

ಉತ್ತರ ಕನ್ನಡ, ಜುಲೈ 31 : ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 23/8/2018.

ಜಿಲ್ಲಾ ಕೇಂದ್ರದಲ್ಲಿರುವ ತಾಲೂಕು ಕಚೇರಿಗಳಲ್ಲಿ ಹಾಗೂ ಇತರ ತಾಲೂಕ ಕಚೇರಿಗಳಲ್ಲಿ ಹೊಸದಾಗಿ ಸೃಜಿಸಲಾದ, ಮುಂಬಡ್ತಿ, ಘಟಕೀಯ ವರ್ಗಾವಣೆ, ವಯೋನಿವೃತ್ತಿಯಿಂದ ತೆರವಾದ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬಳ್ಳಾರಿಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು 30 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಂಚೆ ಮೂಲಕ, ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಬೀದರ್‌ : 53 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಬೀದರ್‌ : 53 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಗೊಂದಲ ಉಂಟಾದರೆ 08382-229857 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಜೊತೆ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ

ಕರ್ನಾಟಕ ಪಿ.ಯು.ಬೋರ್ಡ್ ನಡೆಸುವ ಪಿಯುಸಿ ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವ ಸಮಾನಾಂತರ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿಯ ವಿವರ

ವಯೋಮಿತಿಯ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಯೋಮಿತಿ ವಿವರ ಇಲ್ಲಿದೆ. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವ ವರ್ಗಾವಣೆ ಪತ್ರದಲ್ಲಿರುವ ಜನ್ಮದಿನಾಂಕದ ಆಧಾರದ ಮೇಲೆ ವಯೋಮಿತಿ ಪರಿಗಣಿಸಲಾಗುತ್ತದೆ. ಮಾಜಿ ಸೈನಿಕರಿಗೆ 3, ಅಂಗವಿಕಲ/ವಿಧವೆ/ಜೀತ ಕಾರ್ಮಿಕ ಅಭ್ಯರ್ಥಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕಗಳ ವಿವರ

ಅರ್ಜಿ ಶುಲ್ಕಗಳ ವಿವರ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. (ಬ್ಯಾಂಕ್ ಶುಲ್ಕ ಹೊರತುಪಡಿಸಿ). ಇತರೆ ಅಭ್ಯರ್ಥಿಗಳಿಗೆ 200 ರೂ. ಮಾತ್ರ.

ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ ಯಾವುದೇ ಎಸ್‌ಬಿಐ ಶಾಖೆಯಲ್ಲಿ ಶುಲ್ಕದೊಂದಿಗೆ ಪಾವತಿ ಮಾಡಬಹುದಾಗಿದೆ.

ಆಯ್ಕೆ ವಿಧಾನ

ಆಯ್ಕೆ ವಿಧಾನ

ಕರ್ನಾಟಕ ಜನರಲ್ ಸರ್ವಿಸ್ (ತಿದ್ದುಪಡಿ) ನಿಯಮ 2008 ಮತ್ತು 2009 ಹಾಗೂ ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ಪ್ರಕಾರ ಅಭ್ಯರ್ಥಿಯನ್ನು ಅವರು ಪಿಯುಸಿ ಅಥವ ಸಿಬಿಎಸ್‌ಇ ಅಥವ ಐಸಿಎಸ್ಇ ನಡೆಸುವ 12 ನೇತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳ ಸಂಖ್ಯೆ, ವೇತನ

ಹುದ್ದೆಗಳ ಸಂಖ್ಯೆ, ವೇತನ

ಒಟ್ಟು 30 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವೇತನ ಶ್ರೇಣಿಯ ಮಾಹಿತಿ ಇಲ್ಲಿದೆ.

English summary
Uttara Kannada district administration released notification on official website for the recruitment of 30 Village Accountant posts. The candidates can apply online before 23rd August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X