ಉತ್ತರ ಕನ್ನಡದಲ್ಲಿ 53 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ ಇವೆ
ಉತ್ತರ ಕನ್ನಡ, ಸೆಪ್ಟೆಂಬರ್ 16 : ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 14 ಕೊನೆಯ ದಿನವಾಗಿದೆ.
ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.[ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ, ಪಿಡಿಒ ನೇಮಕಾತಿ ವಿವರ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವ CBSE ಅಥವ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ.[1921 ಹುದ್ದೆಗೆ ಅರ್ಜಿ ಆಹ್ವಾನಿಸಿದ KPTCL]
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರ-1 40 ವರ್ಷಗಳು, 2ಎ/2ಬಿ/3ಎ/3ಬಿ 38 ವರ್ಷಗಳು, ಸಾಮಾನ್ಯ ವರ್ಗ 35 ವರ್ಷಗಳು.[ನೇಮಕಾತಿ ಆದೇಶ ಮತ್ತು ಅರ್ಜಿಗಾಗಿ ಕ್ಲಿಕ್ ಮಾಡಿ]

ಅರ್ಜಿ ಶುಲ್ಕ : ಪ.ಜಾ/ಪ.ಪಂ/ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ.ಗಳು, ಇತರೆ ಅಭ್ಯರ್ಥಿಗಳಿಗೆ 200 ರೂ.ಗಳು (ಬ್ಯಾಂಕ್ ಶುಲ್ಕ ಹೊರತುಪಡಿಸಿ).












Click it and Unblock the Notifications