ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು ಆಗಸ್ಟ್ 12: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ನಿಯಮ 72 ರಡಿ ಕೇಳಲಾದ ಗಮನ ಸೆಳೆಯುವ ಸೂಚನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಉತ್ತರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ- ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಸರ್ಕಾರ ಆನೆ ನಿರೋಧಕ ಕಂದಕ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಆನೆಗಳನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಓಡಿಸುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು, ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವಂತಹ ಕಾರ್ಯಗಳನ್ನು ಇಲಾಖೆ ಕೈಗೊಂಡಿದೆ. ಸಂಘರ್ಷದ ಸಂದರ್ಭದಲ್ಲಿ ಕಾಡಾನೆಗಳನ್ನು ಸೆರೆಹಿಡಿಯುವ ಸಲುವಾಗಿ ಮೂರು ತಂಡಗಳನ್ನು ರಚಿಸಿದ್ದು ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಸೆರೆಹಿಡಿಯುವ ಕಾರ್ಯಾಚರಣೆ ನಡೆದಲ್ಲಿ ಈ ತಂಡವನ್ನು ನಿಯೋಜಿಸಲಾಗುತ್ತಿದೆ.

ಗಸ್ತು ಅರಣ್ಯ ಪಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಅದರಲ್ಲಿ ಮಂಗಳೂರು ವಿಭಾಗಕ್ಕೆ 21 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಇನ್ನು ಅರಣ್ಯ ವೀಕ್ಷಕ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯಡಿ ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿ ಕ್ರಮ
ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಡಾ. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ ಕೊರತೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಕಂದಾಯ ಸಚಿವರ ಪರವಾಗಿ ಉತ್ತರಿಸಿದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗಾಗಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ರಚನೆಯಾಗಿದ್ದು, ಇಲ್ಲಿಯವರೆಗೆ 17 ಸ್ಮಾರಕಗಳನ್ನು ಅಭಿವೃದ್ದಿ ಪಡಿಸಲಾಗಿದ್ದು, ಉಳಿದ ಸ್ಮಾರಕಗಳ ಅಭಿವೃದ್ಧಿಯನ್ನು ಅನುದಾನದ ಲಭ್ಯತೆಗೆ ಅನುಗುಣವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.
26-06-2025 ರಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಯೋಜನೆ ಪರಿಷ್ಕೃತ ಗೊಂಡಿದ್ದು, 742 ಕೋಟಿಗಳಿಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರ ಇದುವರೆಗೆ 325 ಕೋಟಿ ಬಿಡುಗಡೆ ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು ಶರಣರ ವಚನಗಳ ಸಂಗ್ರಹ ಕಾರ್ಯ ಪೂರ್ಣಗೊಂಡಿದ್ದು, ಅದನ್ನು ಧ್ವನಿ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ನೂತನ ಅನುಭವ ಮಂಟಪದ ಒಳಾಂಗಣದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಬಸವ ವನ ಉದ್ಯಾನವನದ ಸುತ್ತ ತಡೆಗೋಡೆಯನ್ನು ಸಹ ನಿರ್ಮಿಸಲಾಗಿದೆ ಎಂದು ಹೇಳಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications