Get Updates
Get notified of breaking news, exclusive insights, and must-see stories!

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಲು ಸೂಚನೆಗಳು

ಶಿವಮೊಗ್ಗ, ಫೆಬ್ರವರಿ 10: ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಸಹಾಯಕ ತಾಂತ್ರಿಕ ವ್ಯವಸ್ಥಾಪಕ, ತುರ್ತು ಚಿಕಿತ್ಸಾ ವೈದ್ಯರ ನೇಮಕಾತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡಲು ಮಾಹಿತಿಗಳು ಇಲ್ಲಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 12 ಮತ್ತು 15ರೊಳಗೆ ಅರ್ಜಿ ಸಲ್ಲಿಸಬಹುದು.

ಸಹಾಯಕ ತಾಂತ್ರಿಕ ವ್ಯವಸ್ಥಾಪಕ: ಶಿವಮೊಗ್ಗ ಜಿಲ್ಲೆಯ 2024-25ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿಯಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ 45 ವರ್ಷ ವಯೋಮಿತಿಯುಳ್ಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವವರಿಂದ ಅರ್ಜಿ ಕರೆಯಲಾಗಿದೆ.

Various Jobs In Shivamogga Instructions Candidates To Apply

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸ್ವವಿವರಗಳೊಂದಿಗೆ ಸಲ್ಲಿಸಬೇಕು.

ಪದವಿ ಪ್ರಮಾಣ ಪತ್ರ, ಅಂತಿಮ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಫೆಬ್ರವರಿ 15 ರೊಳಗಾಗಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಕೆ ಮಾಡಲು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ.

ತುರ್ತು ಚಿಕಿತ್ಸಾ ವೈದ್ಯರ ನೇಮಕ; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು, ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಫೆಬ್ರವರಿ 12ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆ &ಕು.ಕ.ಅಧಿಕಾರಿಗಳು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 08182-222382.

ತರಬೇತಿಗೆ ಅರ್ಜಿ ಹಾಕಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿನಾಂಕ 14/02/2025 ರಿಂದ ದಿನಾಂಕ 15/03/2025ರ ವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.

ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುತ್ತದೆ.

ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ದಿನಾಂಕ 12/02/2025ರೊಳಗಾಗಿ ಡಾ. ಜಯಶ್ರೀ ಎಸ್ 9449187763, ಜಯಶಂಕರ 9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ತರಬೇತಿ ಶುಲ್ಕ ರೂ. 4500 ಆಗಿರುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+