• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

|
Google Oneindia Kannada News

ಬೆಂಗಳೂರು, ನವೆಂಬರ್ 09: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30, 2021 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: ವಿಜಯಪುರ ಜಿಲ್ಲಾ ನ್ಯಾಯಾಲಯ
ಹುದ್ದೆ : Stenographer
ಉದ್ಯೋಗ ಸ್ಥಳ: ವಿಜಯಪುರ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 30, 2021
ಹುದ್ದೆಗಳ ಸಂಖ್ಯೆ: 5

ಸಂಬಳ ನಿರೀಕ್ಷೆ: ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ) ಪರಿಷ್ಕೃತ ವೇತನ ಶ್ರೇಣಿ ನಿಯಮ 2018 ಅನುಸಾರ ಅಂಗೀಕೃತ ಭತ್ಯೆಗಳೊಂದಿಗೆ 27,650-52,650ರು/ ಪ್ರತಿ ತಿಂಗಳಿಗೆ (ದರ್ಜೆ 4)

ಪ್ರಮುಖ ದಿನಾಂಕ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/10/2021
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 30/10/2021 ಮಧ್ಯಾಹ್ನ 11.59ರ ತನಕ.
ಆನ್‌ಲೈನ್‌ನಲ್ಲಿ ಅರ್ಜಿಶುಲ್ಕ ಸಲ್ಲಿಕೆ ಕೊನೆ ದಿನಾಂಕ: 3/12/2021

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಲಯದಿಂದ ಪಿಯುಸಿ, ಡಿಪ್ಲೋಮಾ

ವಯೋಮಿತಿ: ವಿಜಯಪುರ ಇ ಕೋರ್ಟ್ ನೇಮಕಾತಿ ನೋಟಿಫಿಕೇಷನ್‌ನಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 35 ವರ್ಷ(ನವೆಂಬರ್ 30, 2021). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1 ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಕೆಟಗೆರಿ -2, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಸಿಗಲಿದೆ.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ/ಕೆಟಗೆರಿ 1/ದಿವ್ಯಾಂಗ: 100ರು
ಸಾಮಾನ್ಯ ಹಾಗೂ ಹಿಂದುಳಿದ ಅಭ್ಯರ್ಥಿ: 200 ರು
ಶುಲ್ಕ ಪಾವತಿ ವಿಧಾನ: ಆನ್ ಲೈನ್ ಅಥವಾ ಚಲನ್

ನೇಮಕಾತಿ ಪ್ರಕ್ರಿಯೆ: ಟೈಪಿಂಗ್ ಟೆಸ್ಟ್, ಮೆರಿಟ್ ಪಟ್ಟಿ ಹಾಗೂ ವೈಯಕ್ತಿಕ ಸಂದರ್ಶನ.

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1944 ಇವುಗಳ ಅನುಸಾರವಾಗಿ ಮಾಡಲಾಗುವುದು.

ಟೈಪಿಂಗ್ ಪರೀಕ್ಷೆ 100 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 60 ಅಂಕ ಗಳಿಸಬೇಕು. ವೈವಾ ವೋಸಿಯಲ್ಲಿ 20 ಅಂಕಗಳಿಗೆ 10 ಅಂಕ ಪಡೆದುಕೊಳ್ಳಬೇಕು. ಒಟ್ಟಾರೆ 120 ಅಂಕಗಳಿಗೆ 70 ಅಂಕ ಗಳಿಸಿದರೆ ಅರ್ಹರಾಗುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ:
* ವಿಜಯಪುರ ಜಿಲ್ಲಾ ನ್ಯಾಯಾಲಯದ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ಸ್ಟೆನೊಗ್ರಾಫರ್ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು.
ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವ ದಿನಾಂಕ, ಮುಂತಾದ ಮಾಹಿತಿ ಪಡೆಯಲುಇಲ್ಲಿ ಕ್ಲಿಕ್ ಮಾಡಿ

English summary
Vijayapura District Court Recruitment 2021 notification has been released on official website for the recruitment of 5 Stenographer Post vacancies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion