2007 ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಭರ್ತಿ, ಯಾವ ಜಿಲ್ಲೆಯಲ್ಲಿ ಎಷ್ಟು?
ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾವಣೆ ಮಾಡಿದೆ. ಈಗ 2007 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ.
ಬೆಂಗಳೂರು, ಮಾರ್ಚ್ 10; ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿನ 'ಗ್ರಾಮ ಲೆಕ್ಕಿಗರ' ಪದನಾಮವನ್ನು 'ಗ್ರಾಮ ಆಡಳಿತ ಅಧಿಕಾರಿ' ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿತ್ತು. ಈಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 2007 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳನ್ನು ಭರ್ತಿ ಮುಂದಾಗಿದೆ, ಈ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ.
ಸರ್ಕಾರ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (Village Accountant) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಗ್ರಾಮ ಲೆಕ್ಕಿಗ ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾವಣೆ ಮಾಡಿದೆ. ಕಡತಗಳಲ್ಲಿ ಸಹ ಈ ಕುರಿತು ಬದಲಾವಣೆ ತರುವಂತೆ ಹೊರಡಿಸಿದೆ. ಈಗ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ನಡೆಯಲಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಕಂದಾಯ ಇಲಾಖೆ ವೆಬ್‌ಸೈಟ್‌ನಲ್ಲಿ ಶೀಘ್ರವೇ ಈ ಕುರಿತು ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವುದರಿಂದ ಕೆಲವೇ ದಿನಗಳಲ್ಲಿ ಈ ಅಧಿಸೂಚನೆಯನ್ನು ಸರ್ಕಾರ ಹೊರಡಿಸುವ ನಿರೀಕ್ಷೆ ಇದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ತಯಾರಿ ಮಾಡಿಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತದೆ.
ಗ್ರಾಮ ಲೆಕ್ಕಿಗರ ಹುದ್ದೆಯನ್ನು ದ್ವೀತಿಯ ಪಿಯುಸಿ ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ, ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತಿದೆ. ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಈ ನೇಮಕಾತಿಯನ್ನು ಮಾಡುವ ಕುರಿತು ವರದಿ ಸಲ್ಲಿಕೆ ಮಾಡಲು ಸಮಿತಿ ರಚನೆ ಮಾಡಿತ್ತು. ಆದರೆ ಅದು ಇನ್ನೂ ಸಲ್ಲಿಕೆಯಾಗಿ, ನೇಮಕಾತಿ ವಿಧಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು
ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬೆಂಗಳೂರು ನಗರ 48, ಬೆಂಗಳೂರು ಗ್ರಾಮಾಂತರ 51, ತುಮಕೂರು 129, ರಾಮನಗರ 80, ಚಿಕ್ಕಬಳ್ಳಾಪುರ 63, ಚಿತ್ರದುರ್ಗ 93, ಕೋಲಾರ 66, ದಾವಣಗೆರೆ 17, ಶಿವಮೊಗ್ಗ 49, ಮೈಸೂರು 105, ಮಂಡ್ಯ 116, ಚಾಮರಾಜನಗರ 102, ಹಾಸನ 85, ಕೊಡಗು 37, ಚಿಕ್ಕಮಗಳೂರು 32, ದಕ್ಷಿಣ ಕನ್ನಡ 89 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಭರ್ತಿ
ಉಡುಪಿಯಲ್ಲಿ 38, ಬೆಳಗಾವಿ 135, ವಿಜಯಪುರ 22, ಬಾಗಲಕೋಟೆ 60, ಧಾರವಾಡ 31, ಗದಗ 44, ಹಾವೇರಿ 57, ಉತ್ತರ ಕನ್ನಡ 94, ಬೀದರ್ 57, ರಾಯಚೂರು 31, ಕಲಬುರಗಿ 134, ಕೊಪ್ಪಳ 31, ಯಾದಗಿರಿ 32, ಬಳ್ಳಾರಿ 33 ಮತ್ತು ವಿಜಯನಗರ ಜಿಲ್ಲೆಯಲ್ಲಿ 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ಮೂಲಕ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ವೇತನ, ವಯೋಮಿತಿಯ ವಿವರಗಳು
ಕರ್ನಾಟಕ ಸರ್ಕಾರ ಗ್ರಾಮ ಲೆಕ್ಕಿಗ ಹುದ್ದೆಯ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾವಣೆ ಮಾಡಿದೆ. ಆದರೆ ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,400-42,000 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. ವಯೋಮಿತಿ ಸಡಿಲಿಕೆ, ಮೀಸಲಾತಿ ಮುಂತಾದ ವಿವರಗಳನ್ನು ನೇಮಕಾತಿ ಅಧಿಸೂಚನೆ ಪ್ರಕಟವಾದ ಬಳಿಕ ತಿಳಿಯಬಹುದಾಗಿದೆ.

ಅರ್ಜಿ ಶುಲ್ಕ, ನೇಮಕಾತಿ ವಿವರಗಳು
ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಉಳಿದ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಕಟ್ಟಬೇಕಿದೆ. ಅಧಿಸೂಚನೆ ಪ್ರಕಟವಾಗುತ್ತಿದ್ದಂತೆಯೇ https://kandaya.karnataka.gov.in/ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.












Click it and Unblock the Notifications