ಬೀದರ್‌ : 53 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೀದರ್, ಜುಲೈ 12 : ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10, 2018 ಕೊನೆಯ ದಿನವಾಗಿದೆ.

ಹೈದರಾಬಾದ್-ಕರ್ನಾಟಕ ವೃಂದದಲ್ಲಿ 42, ಸ್ಥಳಿಯೇತರ ವೃಂದದಲ್ಲಿ 11 ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣಗೊಂಡಿರಬೇಕು ಅಥವ ಸಿಬಿಎಸ್‌ಸಿ, ಐಸಿಎಸ್‌ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Village Accountant recruitment : Apply for 53 post in Bidar

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 200 ರೂ., ಪ್ರವರ್ಗ 1, ಪ.ಜಾ/ಪ.ಪಂ/ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+