ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌ : 53 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

By Gururaj
|
Google Oneindia Kannada News

ಬೀದರ್, ಜುಲೈ 12 : ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10, 2018 ಕೊನೆಯ ದಿನವಾಗಿದೆ.

ಹೈದರಾಬಾದ್-ಕರ್ನಾಟಕ ವೃಂದದಲ್ಲಿ 42, ಸ್ಥಳಿಯೇತರ ವೃಂದದಲ್ಲಿ 11 ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

908 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ವಿಮಾನ ನಿಲ್ದಾಣ ಪ್ರಾಧಿಕಾರ 908 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ವಿಮಾನ ನಿಲ್ದಾಣ ಪ್ರಾಧಿಕಾರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣಗೊಂಡಿರಬೇಕು ಅಥವ ಸಿಬಿಎಸ್‌ಸಿ, ಐಸಿಎಸ್‌ಸಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜು.17ರಂದು ಹಾಸನದಲ್ಲಿ ಉದ್ಯೋಗ ಮೇಳಜು.17ರಂದು ಹಾಸನದಲ್ಲಿ ಉದ್ಯೋಗ ಮೇಳ

Village Accountant recruitment : Apply for 53 post in Bidar

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ.

166 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಆರ್‌ಬಿಐ166 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಆರ್‌ಬಿಐ

ಅರ್ಜಿ ಸಲ್ಲಿಸುವ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 200 ರೂ., ಪ್ರವರ್ಗ 1, ಪ.ಜಾ/ಪ.ಪಂ/ಮಹಿಳಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

English summary
Bidar district administration released notification on official website for the recruitment of 53 Village Accountant posts. The candidates can apply online before 10 th August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X