ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರದುರ್ಗ; 59 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜನವರಿ 26 : ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 21/2/2020 ಕೊನೆಯ ದಿನವಾಗಿದೆ.

ವಿವಿಧ ಕಾರಣಗಳಿಂದ ಖಾಲಿ ಆಗಿರುವ ಒಟ್ಟು 59 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಖುದ್ದಾಗಿ ಅಥವ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ.

ಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

ಒಟ್ಟು ಹುದ್ದೆಗಳ ಸಂಖ್ಯೆಯನ್ನು ಕಡಿಮೆ ಅಥವ ಹೆಚ್ಚು ಮಾಡಲು ಜಿಲ್ಲಾಧಿಕಾರಿಗಳಿಗೆ ಮಾತ್ರ ಅಧಿಕಾರವಿರುತ್ತದೆ. ಅರ್ಜಿಗಳನ್ನು ಸಲ್ಲಿಸಿದ ಮೇಲೆ ಶುಲ್ಕವನ್ನು ಪಾವತಿ ಮಾಡಲು 25/2/2020 ಕೊನೆಯ ದಿನಾಂಕವಾಗಿದೆ.

ಕೆಪಿಎಸ್‌ಸಿ ನೇಮಕಾತಿ; ಮಹತ್ವದ ಬದಲಾವಣೆ ಕೆಪಿಎಸ್‌ಸಿ ನೇಮಕಾತಿ; ಮಹತ್ವದ ಬದಲಾವಣೆ

ಅರ್ಜಿಯನ್ನು ಭರ್ತಿ ಮಾಡಿದ ಬಳಿಕ ಎಸ್‌ಬಿಐ ಕಲೆಕ್ಟ್ ಮುಖಾಂತರ ಅರ್ಜಿಯ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಸಲ್ಲಿಸಿರುವ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಹಾಗೂ ಬೇರೆ ಯಾವುದೇ ಇತರೆ ನೇಮಕಾತಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

ಕೆಎಸ್‌ಟಿಡಿಸಿ ನೇಮಕಾತಿ; 76 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ ಕೆಎಸ್‌ಟಿಡಿಸಿ ನೇಮಕಾತಿ; 76 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ

ಏನು ಓದಿರಬೇಕು?

ಏನು ಓದಿರಬೇಕು?

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಇ/ಐಸಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಪಡೆದಿರತಕ್ಕದ್ದು.

ಕನ್ನಡ ಭಾಷಾ ಜ್ಞಾನ ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿರಬೇಕು.

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾತಿ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಸಾಮಾನ್ಯ/ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು.

ಅರ್ಜಿಗಳನ್ನು ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಇಂಡಿಯಾ ಶಾಖೆಯಲ್ಲಿ ಆನ್‌ಲೈನ್‌ ಮೂಲಕ ಜಮಾ ಮಾಡತಕ್ಕದ್ದು.

ಅರ್ಹತಾ ಷರತ್ತುಗಳು

ಅರ್ಹತಾ ಷರತ್ತುಗಳು

ಅಭ್ಯರ್ಥಿಯು ಭಾರತೀಯ ನಾಗರಿಕನಾಗಿರತಕ್ಕದ್ದು. ಶೈಕ್ಷಣಿಕ ಅರ್ಹತೆಯನ್ನು ಕರ್ನಾಟಕ ರಾಜ್ಯದಲ್ಲಿಯೇ ಪೂರೈಸಿರಬೇಕು. ಇತರೆ ರಾಜ್ಯಗಳ ಶಿಕ್ಷಣ ಮಂಡಳಿಗಳಿಂದ ಪಡೆದ ವಿದ್ಯಾರ್ಹತೆ ಅಥವ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ವಿಳಾಸ http://chitradurga-va.kar.nic.in/MainPrev.aspx

English summary
Apply for 59 village accountant post in Chitradurga district. Candidates can apply online till February 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X