• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋಲಾರದಲ್ಲಿ 62 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ, ಅರ್ಜಿ ಹಾಕಿ

|

ಬೆಂಗಳೂರು, ನವೆಂಬರ್ 08 : ಕೋಲಾರ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 15/11/2018 ಕೊನೆಯ ದಿನವಾಗಿದೆ.

ಭೂಮಿ ಕೇಂದ್ರದ ಗ್ರಾಮ ಲೆಕ್ಕಿಗರ 8 ಹುದ್ದೆ, ಕಂದಾಯ ವೃತ್ತದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ 54 ಹುದ್ದೆಗಳು ಸೇರಿ 62 ಹುದ್ದೆಗಳು ಖಾಲಿ ಇವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ನೇಮಕಾತಿ ಆದೇಶ ಸ್ಪಷ್ಟಪಡಿಸಿದೆ.

ನಾಡ ಕಚೇರಿ ಮತ್ತು ಭೂಮಿ ಕೇಂದ್ರದ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ವಿದ್ಯಾರ್ಹತೆ ಅಥವ ಸಿಬಿಎಸ್‌ಇ/ಐಸಿಎಸ್ಇ ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗಣಕಯಂತ್ರದ ವಿದ್ಯಾರ್ಹತೆ ಹೊಂದಿದ್ದು, ಅಂಗಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರವನ್ನು ಪಡೆದಿರಬೇಕು.

ಕಂದಾಯ ವೃತ್ತಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ವಿದ್ಯಾರ್ಹತೆ ಅಥವ ಸಿಬಿಎಸ್‌ಇ/ಐಸಿಎಸ್ಇ ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ : ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35, 2ಎ/2ಬಿ/3ಎ/3ಬಿ 38, ಪಜಾ/ಪಪಂ/ಪ್ರವರ್ಗ -1 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ವಿಧವೆಯರಿಗೆ/ಅಂಗವಿಕಲರಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕದ ವಿವರ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂ.ಗಳು. ಇತರ ಅಭ್ಯರ್ಥಿಗಳಿಗೆ 200 ರೂ.ಗಳು. ಅರ್ಜಿಗಳನ್ನು ಭರ್ತಿ ಮಾಡಿದ ಬಳಿಕ ಚಲನ್‌ನ ದ್ವಿಪ್ರತಿಗಳನ್ನು ತೆಗೆದುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿ ಮಾಡಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

ನಾಡ/ಭೂಮಿ ಕಚೇರಿಗಳಿಗೆ

ಕಂದಾಯ ವೃತ್ತಗಳಿಗೆ

English summary
Village Accountant Recruitment Kolar 2018. Apply for Village Accountant post in Kolar district 62 post. Last date to submit application online 15/11/2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X