ಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿ

ಬೆಂಗಳೂರು, ಜನವರಿ 11; ಕರ್ನಾಟಕದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಗ್ರಾಮ ಲೆಕ್ಕಿಗರ ಹಲವಾರು ಹುದ್ದೆಗಳು ಖಾಲಿ ಇವೆ. ನೇಮಕಾತಿಗಾಗಿ ಹಲವಾರು ಆಕಾಂಕ್ಷಿಗಳು ಕಾಯುತ್ತಿದ್ದು, ಶೀಘ್ರದಲ್ಲಿಯೇ ಅವರಿಗೆ ಸಿಹಿಸುದ್ದಿ ಸಿಗಲಿದೆ.

ರಾಜ್ಯದಲ್ಲಿ ಒಟ್ಟು ಮಂಜೂರಾದ ಗ್ರಾಮ ಲೆಕ್ಕಿಗರ ಹುದ್ದೆಗಳು 9,839. ಪ್ರಸ್ತುತ 1,789 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ನಡೆಸಲಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಜನವರಿ 1ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ. ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

Village Accountant Recruitment Letter To Deputy Commissioner

ಪತ್ರದಲ್ಲಿ ಏನಿದೆ?; ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲೆಗಳಲ್ಲಿ ಮಂಜೂರಾದ ಗ್ರಾಮ ಲೆಕ್ಕಿಗರ ಹುದ್ದೆಯಲ್ಲಿ ಶೇಕಡ 30ಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸುವಂತೆ ತಿಳಿಸಲಾಗಿದೆ.

ಅಂತಿಮ ನೇಮಕಾತಿ ಆದೇಶವನ್ನು ಹೊರಡಿಸುವ ಮೊದಲು ಆಯವ್ಯಯದಲ್ಲಿ ಅನುದಾನ ಲಭ್ಯತೆಯನ್ನು ಖತರಿಪಡಿಸಿಕೊಳ್ಳಲು ಕಡ್ಡಾಯವಾಗಿ ಸರ್ಕಾರದ ಅನುಮತಿಯನ್ನು ಪಡೆಯಲು ಅಗತ್ಯ ಕ್ರಮ ವಹಿಸುವಂತೆ ಕೋರಲಾಗಿದೆ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

letter

ಹೇಗೆ ನಡೆಯಲಿದೆ ನೇಮಕಾತಿ?; ಗ್ರಾಮ ಲೆಕ್ಕಿಗರ ಮೂಲಕ ಕಂದಾಯ ಇಲಾಖೆ ಕೆಲಸ ಕಾರ್ಯಗಳನ್ನು ತಳಮಟ್ಟದಲ್ಲಿ ಕಾರ್ಯಗತಗೊಳಿಸಬೇಕಾಗುತ್ತದೆ. ಈ ಹುದ್ದೆಯು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸಮಾನಾಂತರ ಹುದ್ದೆಯಾಗಿದೆ.

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಗ್ರಾಮ ಲೆಕ್ಕಿಗರ ನೇಮಕಾತಿ ಸಕ್ಷಮ ಪ್ರಾಧಿಕಾರ ಆಗಿರುತ್ತಾರೆ. ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಜಿಲ್ಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ನೇರ ನೇಮಕಾತಿ ಮೂಲಕ ನಿಯಮಾನುಸಾರ ತುಂಬಲಾಗುತ್ತದೆ.

ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಸರ್ಕಾರ ಈಗ ಭರ್ತಿ ಮಾಡುವುದಿಲ್ಲ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ಕ್ಕೆ ಕರ್ನಾಟಕ ಸಾಮಾನ್ಯ ಸೇವೆಗಳು (ರೆವಿನ್ಯು ಸಬಾರ್ಡಿನೇಟ್ ಬ್ರಾಂಚ್) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು 2008ರ ಅನ್ವಯ ದ್ವಿತೀಯ ಪಿಯುಸಿಯಲ್ಲಿಗಳಿಸಿದ ಗರಿಷ್ಠ ಅಂಕಗಳನ್ನು ಪರಿಗಣಿಸಿ ಹುದ್ದೆ ಭರ್ತಿ ಮಾಡಲಾಗುತ್ತದೆ.

ಕಂದಾಯ ಇಲಾಖೆ 2021ರ ಅಕ್ಟೋಬರ್‌ನಲ್ಲಿ ಜಿಲ್ಲಾಧಿಕಾರಿಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳ ಆಧಾರದ ಮೇಲೆ ಚಿಕ್ಕಬಳ್ಳಾಪುರ 40, ಬೆಂಗಳೂರು ಗ್ರಾಮಾಂತರ 11, ಉಡುಪಿ 18, ರಾಮನಗರ 1, ಚಿತ್ರದುರ್ಗ 59, ಶಿವಮೊಗ್ಗ 69, ಹಾಸನ 34, ಮಂಡ್ಯ 54, ರಾಯಚೂರು 51, ದಾವಣಗೆರೆ ಜಿಲ್ಲೆಯಲ್ಲಿ 18 ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಿತ್ತು.

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿಗೆ ತಡೆ ನೀಡಿತ್ತು. ಬಳಿಕ ನೇಮಕಾತಿ ನಡೆಸಲು ಒಪ್ಪಿಗೆ ಕೊಡಲಾಗಿತ್ತು. ಇಲಾಖೆಗಳ ಪ್ರಸ್ತಾವನೆಗಳನ್ನು ಪರಿಗಣಿಸಿ ತುರ್ತು ಅಗತ್ಯವಿರುವ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡಲಾಗುತ್ತಿದೆ.

ಸೆಪ್ಟೆಂಬರ್‌ನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿ ಬಗ್ಗೆ ಮಾಹಿತಿ ನೀಡಿತ್ತು. ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಒಟ್ಟು ಗ್ರಾಮ ಲೆಕ್ಕಿಗರ ಹುದ್ದೆ 9,839. ಪ್ರಸ್ತುತ ರಾಜ್ಯದಲ್ಲಿ 1,789 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ ಎಂದು ವಿಧಾನ ಪರಿಷತ್‌ನಲ್ಲಿ ಲಿಖಿತ ಉತ್ತರ ನೀಡಲಾಗಿತ್ತು.

ಜಿಲ್ಲಾಧಿಕಾರಿಗಳ ಕಚೇರಿ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯುತ್ತದೆ. ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+