ಶ್ರೀ ಕೃಷ್ಣದೇವರಾಯ ವಿವಿ ನೇಮಕಾತಿ; 105 ಹುದ್ದೆಗಳು

ಬೆಂಗಳೂರು, ಆಗಸ್ಟ್ 15 : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 21/8/2020 ಕೊನೆಯ ದಿನವಾಗಿದೆ.

ವಿಎಸ್‌ಕೆಯು ಒಟ್ಟು 105 ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇವುಗಳಲ್ಲಿ ಪೂರ್ಣಕಾಲಿಕ 79, ಅರೆಕಾಲಿಕ 26 ಹುದ್ದೆಗಳು ಸೇರಿವೆ. ಈ ಹುದ್ದೆಗಳು ತಾತ್ಕಾಲಿಕವಾಗಿದ್ದು, 2020-21ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತ.

ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ, ಕೊಪ್ಪಳದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಯ ಸೇವೆಯು ತೃಪ್ತಿಕರವಾಗಿರದಿದ್ದಲ್ಲಿ, ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಲಾಗುತ್ತದೆ.

VSKU Recruitment 2020 Apply For 105 Guest Faculty Posts

ನೇಮಕಗೊಳ್ಳುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧೀನಕ್ಕೊಳಪಟ್ಟಿರುವ ಯಾವುದೇ ಸ್ನಾತಕೋತ್ತರ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲು ಸಿದ್ಧವಿರಬೇಕಿದೆ. ಅಭ್ಯರ್ಥಿಗಳು ತಮ್ಮ ವಿಭಾಗದ ಮುಖ್ಯಸ್ಥರು ನೀಡುವ ಯಾವುದೇ ಕೆಲಸಗಳನ್ನು ನಿಷ್ಠೆಯಿಂದ ಪಾಲಿಸುವುದು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ವಿಎಸ್‌ಕೆಯು ನೇಮಕಾತಿ ನಿಯಮಗಳ ಅನ್ವಯ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳು ರೂ. 250 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇತರ ಎಲ್ಲಾ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನದ ವೇಳೆಯಲ್ಲಿ ಸಲ್ಲಿಸಿರುವ ಮೂಲ ಪ್ರಮಾಣಪತ್ರಗಳನ್ನು ಪರಿಶೀಲಿಸಿ ತಾತ್ಕಾಲಿಕ ಆದೇಶ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+