ಬಳ್ಳಾರಿಯಲ್ಲಿ ಆಗಸ್ಟ್ 18 ರಂದು ನೇರ ಸಂದರ್ಶನ

ಬಳ್ಳಾರಿ, ಆಗಸ್ಟ್ 17: ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಗಸ್ಟ್ 18ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ವಿವಿಧ ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಹಳೇ ತಹಶೀಲ್ದಾರ್ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

walk-in-interview-at-ballari

ಸುಮಾರು 3ಕ್ಕೂ ಹೆಚ್ಚು ಕಂಪನಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುತ್ತಿದ್ದು, ತಮ್ಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅಭ್ಯರ್ಥಿಗಳಿಗೆ ಮಾಹಿತಿ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್‌ ಕಾರ್ಡ್‌ನ ಪ್ರತಿ ಮತ್ತು ಸ್ವ-ವಿವರಗಳ ಪ್ರತಿಗಳೊಂದಿಗೆ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನೇರ ಸಂದರ್ಶನದಲ್ಲಿ ಪಿಯುಸಿ, ಐಟಿಐ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 8073365184, 9019692898 ಹಾಗೂ 7892971984.

ಭಾಲ್ಕಿಯಲ್ಲಿ ಬೃಹತ್ ಉದ್ಯೋಗ ಮೇಳ; ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಆಗಸ್ಟ್‌ 21ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಬಿಕೆಐಟಿ ಭಾಲ್ಕಿ, ಜಿಲ್ಲಾಡಳಿತ ಬೀದರ್ ಮತ್ತು ಕ್ಯಾಡಮ್ಯಾಕ್ಸ್ ಸೊಲ್ಯೂಷನ್ಸ್ ಬೆಂಗಳೂರು ಜಂಟಿಯಾಗಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿವೆ.

ದೇಶದ ಅತ್ಯುನ್ನತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

SSLC, PUC, ITI, Diploma, Degree (Freshers and Experience) ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆಗಸ್ಟ್‌ 21ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ಬಿಕೆಐಟಿ ಭಾಲ್ಕಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಯುವಕರು ಮತ್ತು ಯುವತಿಯರು ಲಿಂಕ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+