ಬಳ್ಳಾರಿ; ವಿವಿಧ ಹುದ್ದೆಗಳಿಗೆ ಜೂನ್ 12ರಂದು ನೇರ ಸಂದರ್ಶನ
ಬಳ್ಳಾರಿ, ಜೂನ್ 06: ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಜೂನ್ 12ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ, ಅರ್ಹರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಮತ್ತು ಎನ್.ಪಿ.ಪಿ.ಸಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಯಲ್ಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ನೇಮಕಾತಿ ನಡೆಯಲಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಅಹ್ವಾನಿಸಲಾಗಿದೆ. ನೇರ ಸಂದರ್ಶನ ಜೂನ್ 12ರಂದು ಬೆಳಗ್ಗೆ 10.30 ರಿಂದ ಸಂಜೆ 5 ರವರೆಗೆ ನಗರದ ಅನಂತಪುರ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ನಡೆಯಲಿದೆ.
ಹುದ್ದೆಗಳ ವಿವರ; ಜಿಲ್ಲಾ ಹೆಲ್ತ್ ಅಂಡ್ ವೆಲ್‍ನೆಸ್ ಸೆಂಟರ್ ಕೋ-ಆರ್ಡಿನೇಟರ್ 1 ಹುದ್ದೆ, ಜಿಲ್ಲಾ ಸಲಹೆಗಾರರು 1 ಹುದ್ದೆ, ಫಿಜಿಷಿಯನ್ 2, ಶೂಶ್ರೂಷಕರು 2 ಸೇರಿ ಒಟ್ಟು 7 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಅನುಭವ ಹೊಂದಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಈ ಹುದ್ದೆಯು ಒಂದು ವರ್ಷ ಅವಧಿಗೆ ಅಥವಾ ಈ ಕಚೇರಿಯ ಮುಂದಿನ ಆದೇಶದವರಿಗೆ ಸೀಮಿತವಿರುತ್ತವೆ. ಸದರಿ ಹುದ್ದೆಯು ಯಾವುದೇ ಕಾರಣಕ್ಕೂ ಸರ್ಕಾರಿ ಸೇವೆಯಲ್ಲಿ ಸಕ್ರಮಗೊಳಿಸಲಾಗುವುದಿಲ್ಲ ಮತ್ತು ಅಭ್ಯರ್ಥಿಗಳ ಆಯ್ಕೆಯನ್ನು ಮೀಸಲಾತಿ ಹಾಗೂ ಗಳಿಸಿದ ಅಂಕಗಳ ಆಧಾರದ ಮೇಲೆ ಮಾಡಲಾಗುತ್ತದೆ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಹುದ್ದೆಯ ಕುರಿತು ತಮ್ಮ ಬಯೋಡಾಟಾದಲ್ಲಿ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಅಗತ್ಯ ವಿದ್ಯಾರ್ಹತೆ, ಅನುಭವ, ಜಾತಿ ಪ್ರಮಾಣ ಪತ್ರ, ಮತ್ತು ಇತರೆ ದೃಢಿಕೃತ ನಕಲು ದಾಖಲಾತಿಗಳ ಪ್ರತಿಗಳ ಒಂದು ಸೆಟ್ ಹಾಗೂ ತಾವು ಸಲ್ಲಿಸುವ ದಾಖಲಾತಿಗಳ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-274031ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ. ಕೆ. ತಿಳಿಸಿದ್ದಾರೆ.
ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯು ಜೂನ್ 8ರಂದು ಆರಂಭವಾಗಲಿದೆ.
ಆಸಕ್ತರು ಜೂನ್ 7ರೊಳಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ತನಕ ಮೈಸೂರಿನಲ್ಲಿರುವ ಕೇಂದ್ರ ಕಚೇರಿಗೆ ಆಗಮಿಸಿ ಹೆಸರು ನೋಂದಾಯಿಸಿ ತರಬೇತಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2515944, 9964760090 ಸಂಪರ್ಕಿಸಬಹುದು.












Click it and Unblock the Notifications