ಬಳ್ಳಾರಿ; ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ನೇರ ಸಂದರ್ಶನ

ಬಳ್ಳಾರಿ, ಆಗಸ್ಟ್‌ 03; ಬಳ್ಳಾರಿಯಲ್ಲಿ ಡಾಟಾ ಎಂಟ್ರಿ ಅಪರೇಟರ್ ತಾತ್ಕಾಲಿಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಆಗಸ್ಟ್ 9ರಂದು ಆಯೋಜಿಸಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದು.

ಬಳ್ಳಾರಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ ಡಾಟಾ ಎಂಟ್ರಿ ಅಪರೇಟರ್ ತಾತ್ಕಾಲಿಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನೇರ ಸಂದರ್ಶನ ನಡೆಯಲಿದೆ.

jobs (14)

ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ಗುರುರಾಜ ತಿಳಿಸಿದ್ದಾರೆ. ಈ ಹುದ್ದೆಗಳಿಗೆ ಯಾವುದೇ ಪದವಿ, ಕಂಪ್ಯೂಟರ್ ಜ್ಞಾನ (ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್) ಹಾಗೂ ಕನಿಷ್ಟ 1 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಮೂಲ ಅಂಕಪಟ್ಟಿಗಳು, ಪ್ರಮಾಣ ಪತ್ರ ಹಾಗೂ ದೃಢೀಕೃತ ನಕಲು ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಆಗಸ್ಟ್ 9ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ನೂತನ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಆಸಕ್ತ ಮತ್ತು ಅರ್ಹಾ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-277415 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಆಗಸ್ಟ್ 5ರಂದು ಉದ್ಯೋಗ ಮೇಳ; ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಡಾನ್ ಬಾಸ್ಕೋ ಪ್ರಥಮ ದರ್ಜೆ ಕಾಲೇಜು ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 5ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗದ ಚಳ್ಳಕೆರೆ ರಸ್ತೆಯ ಚಿತ್ರ ಡಾನ್ ಬಾಸ್ಕೋ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಮೇಳದಲ್ಲಿ 15ಕ್ಕೂ ಹೆಚ್ಚು ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ಮತ್ತು ಇತರೆ ಪದವೀಧರು ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 30 ವರ್ಷಗಳು.

ಅಭ್ಯರ್ಥಿಗಳು ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ತರಬೇಕು. ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020, 9945587060 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+