ಬಳ್ಳಾರಿ: ಏಪ್ರಿಲ್ 11ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಬಳ್ಳಾರಿ, ಏಪ್ರಿಲ್ 08: ಬಳ್ಳಾರಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಏಪ್ರಿಲ್ 11ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 21 ರಿಂದ 60 ವರ್ಷ ವಯೋಮಿತಿಗೊಳಪಟ್ಟ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಬಳ್ಳಾರಿ ತಾಲೂಕಿನ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26ನೇ ಸಾಲಿಗೆ ವಿವಿಧ ಹುದ್ದೆಗಳ ಭರ್ತಿಗೆ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳಿಗೆ 21 ರಿಂದ 60 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ನವೋದಯ ಅಥವಾ ಕೇಂದ್ರಿಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್-ಇನ್ ಸಂದರ್ಶನ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಸಂದರ್ಶನ ಆಯೋಜಿಸಲಾಗಿದೆ. ಈ ಹುದ್ದೆಗಳು ತಾತ್ಕಾಲಿಕ ಆಗಿರುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.
ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನ ಸಮಯದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.
ಹುದ್ದೆಗಳ ವಿವರ: ಕನ್ನಡ ಶಿಕ್ಷಕ 1, ಜೀವಶಾಸ್ತ್ರ ಶಿಕ್ಷಕ 1, ಇಂಗ್ಲೀಷ್ ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕ 1, ಕನ್ನಡದಲ್ಲಿ ತರಬೇತಿ ಪಡೆದ ಪದವೀಧರ ಶಿಕ್ಷಕರು 2, ದೈಹಿಕ ಶಿಕ್ಷಕರು (ಪುರುಷ ಮತ್ತು ಮಹಿಳೆ) 1+ 1 ಮತ್ತು ಹಾಸ್ಟೆಲ್ ವಾರ್ಡನ್ 1.
ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08392-242453.
ಉದ್ಯೋಗ ಮೇಳ: ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಕಲಬುರಗಿಯ ಕೆ.ಸಿ.ಟಿ ಕ್ಯಾಂಪಸ್‌ನಲ್ಲಿ ಏಪ್ರಿಲ್ 16ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಇರುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.
ಬೃಹತ್ ಉದ್ಯೋಗ ಮೇಳ ನಡೆಯುವ ಕಲಬುರಗಿ ನಗರದ ಕೆ.ಸಿ.ಟಿ ಇಂಜಿನಿಯರಿಂಗ್ ಕಾಲೇಜಿಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಉದ್ಯೋಗ ಮೇಳದ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಯುವನಿಧಿ ಯೋಜನೆಯಡಿ ನೋಂದಾಯಿತ 73 ಸಾವಿರ ಜನರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮಾಹಿತಿ ನೀಡಲಾಗಿದೆ. ನೋಂದಣಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ https://skillconnect.kaushalkar.com ನಲ್ಲಿ ಹೆಸರು ನೋಂದಾಯಿಸಿಕೊಂಡು ಅಥವಾ ಅಂದೇ ನೇರವಾಗಿಯೂ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ನಿರಂತರವಾಗಿ ಈ ರೀತಿಯ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗುತ್ತಿದೆ. ವೃತ್ತಿಪರ ಕೌಶಲ್ಯ ಹೆಚ್ಚಿಸಲು ನಿರಂತರ ತರಬೇತಿ, ಕಾರ್ಯಾಗಾರ ಸಹ ಆಯೋಜಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಕಲಬುರಗಿ ಉದ್ಯೋಗ ಮೇಳಕ್ಕೆ ಪೂರಕವಾಗಿ ಸಂದರ್ಶನ, ಸಂವಹನ ಕೌಶಲ್ಯ ಹೆಚ್ಚಿಸಲು ಯುವಕರಿಗೆ ಕಾಲೇಜುವಾರು ಕಾರ್ಯಾಗಾರ ಆಯೋಜಿಸಿದ್ದು, ಇದನ್ನು ಯುವ ಸಮೂಹ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications