ಜುಲೈ 12ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ, ಪ್ರವೇಶ ಉಚಿತ
ಬಳ್ಳಾರಿ, ಜುಲೈ 11; ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜುಲೈ 12ರ ಬುಧವಾರ ನೇರ ಸಂದರ್ಶನ ಆಯೋಜನೆ ಮಾಡಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಬಳ್ಳಾರಿ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ವಿದ್ಯಾರ್ಹತೆಯ ವಿವರ; ಈ ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ, ಪದವಿ (ತಾಂತ್ರಿಕವಲ್ಲದ) ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ ಮತ್ತು ರೆಸ್ಯೂಮ್ ತರಬೇಕು ಎಂದು ಸೂಚನೆ ನೀಡಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ 8073365184, 9019692898, 7892971984 ಸಂಖ್ಯೆಗೆ ಕರೆ ಮಾಡಬಹುದು.
ಕೊಪ್ಪಳದಲ್ಲಿ ನೇರ ಸಂದರ್ಶನ; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜುಲೈ 12ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಿದೆ.
ಅಪೋಲೊ ಫಾರ್ಮಸಿ ಬೆಂಗಳೂರು ಮತ್ತು ನವಭಾರತ ಅಗ್ರೋ ಲಿಮಿಟೆಡ್ ಹುಬ್ಬಳ್ಳಿ ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಡಿ.ಫಾರ್ಮಸಿ, ಬಿ.ಫಾರ್ಮಸಿ ಮತ್ತು ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ. ಭಾಗವಹಿಸುವ ಅಭ್ಯರ್ಥಿಗಳಿಗೆ 18 ರಿಂದ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಯುವಕರು ಮಾತ್ರ ಇದರಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್‌ನ ಪ್ರತಿ, ರೆಸ್ಯೂಮ್ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539-220859, 8105693234, 6361143422.












Click it and Unblock the Notifications