ಬಳ್ಳಾರಿ; ಜೂನ್ 20ರಂದು ನೇರ ಸಂದರ್ಶನ
ಬಳ್ಳಾರಿ, ಜೂನ್ 19: ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿಸುದ್ದಿ. ಬಳ್ಳಾರಿಯಲ್ಲಿ ಜೂನ್ 20ರ ಗುರುವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಪಿಯುಸಿ ಅಥವಾ ಯಾವುದೇ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು, ಅಗತ್ಯ ದಾಖಲೆಗಳ ಜೊತೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಜೂನ್ 20ರಂದು ನೇರ ಸಂದರ್ಶನ ಪಾರ್ವತಿ ನಗರದಲ್ಲಿನ ಎಸ್‍ಎಲ್‍ವಿ ಟವರ್ ಹತ್ತಿರದ 2ನೇ ಮಹಡಿ, ನಂಬರ್-3ರ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಆಫಿಸ್ ಕಚೇರಿಯಲ್ಲಿ ನಡೆಯಲಿದೆ.
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಈ ಕುರಿತು ಮಾಹಿತಿ ನೀಡಿದ್ದು, ಪಿಯುಸಿ ಅಥವಾ ಯಾವುದೇ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ತಮ್ಮ ಸ್ವ-ವಿವರದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊಬೈಲ್ ಸಂಖ್ಯೆ 9742718891, 9900827768 ಅಥವಾ 8277000619ಗೆ ಸಂಪರ್ಕಿಸಬಹುದು.
ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ: ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಇಲಾಖೆ ಕಾನೂನು ವೃತ್ತಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ನೀಡಲಾಗುತ್ತದೆ.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಈ ಕುರಿತು ಮಾಹಿತಿ ನೀಡಿದ್ದು, ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ 2024-25ನೇ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಗಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಅರ್ಹ ಪದವೀಧರರು ಜೂನ್ 30ರ ಒಳಗಾಗಿ ಇಲಾಖೆಯ ವೆಬ್‍ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರವು ಪ್ರದೇಶದಲ್ಲಿನ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಉದ್ಯೋಗ ಮೇಳ: ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡಿದೆ.
ಜೂನ್ 22ರ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಹಾರಾಣಿ ಅಮ್ಮಣ್ಣಿ ಲಕ್ಷ್ಮೀ ಕಾಲೇಜ್ ಆವರಣ ಮಲ್ಲೇಶ್ವರಂ, 18ನೇ ಅಡ್ಡ ರಸ್ತೆ ಬೆಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗಮೇಳದಲ್ಲಿ ಆಸಕ್ತ ವಿಕಲಚೇತನ ಆಭ್ಯರ್ಥಿಗಳು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08182 295234/ 251676 ಸಂಖ್ಯೆಗೆ ಸಂಪರ್ಕಿಸಿ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications