ಬಳ್ಳಾರಿಯಲ್ಲಿ ಸೆಪ್ಟೆಂಬರ್ 1ರಂದು ನೇರ ಸಂದರ್ಶನ
ಬಳ್ಳಾರಿ, ಆಗಸ್ಟ್ 30; ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸೆಪ್ಟೆಂಬರ್ 1ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಸಂದರ್ಶನದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸೆಪ್ಟೆಂಬರ್ 1ರ ಶುಕ್ರವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಹಳೇ ತಹಶೀಲ್ದಾರರ್ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಿದೆ.

ಈ ನೇರ ಸಂದರ್ಶನದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿವೆ. ತಮ್ಮಲ್ಲಿನ ವಿವಿಧ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಉಚಿತವಾಗಿ ನೇರ ಸಂದರ್ಶನ ಎದುರಿಸಬಹುದು.
ಅಭ್ಯರ್ಥಿಗಳಿಗೆ ಮಾಹಿತಿ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ಮೊಬೈಲ್ ಸಂಖ್ಯೆ 8073365184, 9019692898 ಹಾಗೂ 7892971984.
ವಿವಿಧ ಯೋಜನೆಯಡಿಯಲ್ಲಿ ಸಾಲ; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಸ್ವಾವಲಂಭಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲದ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ), ಸಮುದಾಯ ಆಧಾರಿತ ತರಬೇತಿ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಅರ್ಜಿ ಸಲ್ಲಿಕೆಗಾಗಿ ವೆಬ್ ಸೈಟ್ https://kmdconline.karnataka.gov.in ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆ ಮಾಡಲು ಸೆಪ್ಟಂಬರ್ 25 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)., ಜಿಲ್ಲಾ ವ್ಯಾವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ , ಉತ್ತರ ವಿಭಾಗ, ನಂ. 40, 2ನೇ ಅಡ್ಡ ರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್, ಗಂಗಾ ನಗರ, ಬೆಂಗಳೂರು-32 ಇಲ್ಲಿಗೆ ಸಲ್ಲಿಕೆ ಮಾಡಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23539786 ಅಥವಾ ಸಹಾಯವಾಣಿ ಸಂಖ್ಯೆ 8277799990ಗೆ ಸಂಪರ್ಕಿಸಬಹುದು.












Click it and Unblock the Notifications