ಬಳ್ಳಾರಿ, ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ: ನೇರ ಸಂದರ್ಶನದ ದಿನಾಂಕ, ವಿವರ

ಬಳ್ಳಾರಿ, ನವೆಂಬರ್ 27: ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿಯೊಂದಿದೆ. ವಿವಿಧ ಹುದ್ದೆಗಳ ಭರ್ತಿಗೆ ಎರಡು ಜಿಲ್ಲೆಗಳ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತರು, ಅರ್ಹರು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 29ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ರ ತನಕ ಹಳೇ ತಾಲ್ಲೂಕು ಕಛೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಿದೆ.

Walk In Interview At Chitradurga And Ballari Know Schedule

ಜೆಎಸ್‌ಡಬ್ಲ್ಯು ಸಿಮೆಂಟ್ ಕಂಪನಿ ಮತ್ತು ಆಕ್ಸಿಸ್ ಬ್ಯಾಂಕ್ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ವಿದ್ಯಾರ್ಹತೆ ಡಿಪ್ಲೋಮಾ ಸಿವಿಲ್, ಸಿವಿಲ್ ಇಂಜಿನಿಯರಿಂಗ್. ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ತಿಳಿಸಲಾಗಿದೆ.

ಆಕ್ಸಿಸ್ ಬ್ಯಾಂಕ್ ತಮ್ಮಲ್ಲಿನ ಹುದ್ದೆಗೆ ಪಿಯುಸಿ, ಬಿಎ, ಬಿಕಾಂ, ಬಿಬಿಎ ಹಾಗೂ ಇತರೆ ಪದವೀಧರರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇರ ಸಂದರ್ಶನದಲ್ಲಿ ಪುರುಷರಿಗೆ ಮಾತ್ರ ಅವಕಾಶವಿದೆ.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಹಳೇ ತಾಲ್ಲೂಕು ಕಛೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9742718891, 9663263086, 9900827768, 6360408094 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗದಲ್ಲಿ ನೇಮಕಾತಿ ಸಂದರ್ಶನ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ನವೆಂಬರ್ 30ರ ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3ರ ತನಕ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಆಯೋಜನೆ ಮಾಡಿದೆ.

ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿದ್ದು, ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು.

ಕರೆ ಮಾಡಲು ದೂರವಾಣಿ ಸಂಖ್ಯೆಗಳು 7022459064, 8105619020, 9945587060, 9964528212, 7019755147.

ಯುವನಿಧಿ ಯೋಜನೆ ನೋಂದಣಿ ಮಾಡಿಸಿ: ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದೆ. ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ.

2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000 (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500 (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ಗಳನ್ನು ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

2022-23ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣಾರಾದವರು, ಪದವಿ/ ಡಿಪ್ಲೊಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಅರ್ಹರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+