ಚಿತ್ರದುರ್ಗ; ಡಿಸೆಂಬರ್ 11ರಂದು ನೇರ ಸಂದರ್ಶನ
ಚಿತ್ರದುರ್ಗ, ಡಿಸೆಂಬರ್ 05; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಚಿತ್ರದುರ್ಗ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಆಸಕ್ತ ಮತ್ತು ಅರ್ಹರು 11/12/2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಚಿತ್ರದುರ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 15 ವಿವಿಧ ತಜ್ಞ ವೈದ್ಯರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 8 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಅಥವಾ ಖಾಯಂ ವೈದ್ಯರನ್ನು ನೇಮಿಸುವವರಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಹ ಮತ್ತು ಇಚ್ಚೆಯುಳ್ಳ ಅಭ್ಯರ್ಥಿಗಳು ದಿನಾಂಕ 11/12/2023ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಚಿತ್ರಮರ್ಗ ಇಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ನೇರ ಸಂದರ್ಶನಕ್ಕೆ ಬರುವಾಗ ರೆಸ್ಯೂಮ್, ಮೀಸಲಾತಿಗೆ ಸಂಬಂಧ ಪಟ್ಟ ಜಾತಿ ಪ್ರಮಾಣ ಪತ್ರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ಸದರಿ ದಾಖಲಾತಿಗಳ ಜೆರಾಕ್ಸ್‌ನ ದ್ವಿ-ಪ್ರತಿಗಳೊಂದಿಗೆ ಹಾಜರಾಗಲು ಸೂಚಿಸಲಾಗಿದೆ.
ಹುದ್ದೆಗಳ ವಿವರ; ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು 8, ಅರವಳಿಕೆ ತಜ್ಞರು 7, ಪ್ರಸೂತಿ ತಜ್ಞರು 5, ಮಕ್ಕಳ ತಜ್ಞರು 3 ಹುದ್ದೆಗಳ ಭರ್ತಿಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.
ಆಯ್ಕೆಯಾದ ತಜ್ಞ ವೈದ್ಯರುಗಳಿಗೆ ಮಾಸಿಕ ಸಂಭಾವನೆ ರೂ 80,000, ಸಾಮಾನ್ಯ ಕರ್ತವ್ಯ ವೈದ್ಯರಿಗೆ ಮಾಸಿಕ ಸಂಭಾವನೆ ರೂ 60,000ಗಳಾಗಿದ್ದು ಷರತ್ತು ಮತ್ತು ನಿಬಂಧನೆಗಳು ಅನ್ವಯಿಸುತ್ತವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿತ್ರದುರ್ಗ ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ಸೂಚಿಸಲಾಗಿದೆ.
ಅರ್ಜಿ ಆಹ್ವಾನ; ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ದೇವದಾಸಿ ಪುನರ್ವಸತಿ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 22 ಕೊನೆಯ ದಿನವಾಗಿದೆ. ಯೋಜನೆಗಳ ಲಾಭ ಪಡೆಯಲಿಚ್ಛಿಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7019967954 ಕೆರೆ ಮಾಡಬಹುದು ಹಾಗೂ ಕಚೇರಿ ಭೇಟಿ ನೀಡಬಹುದು ಎಂದು ಚಿತ್ರದುರ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.












Click it and Unblock the Notifications