ಏ.7ರಂದು ಮೈಸೂರಲ್ಲಿ ಉದ್ಯೋಗ ಮೇಳ, ದಾವಣಗೆರೆಯಲ್ಲಿ ನೇರ ಸಂದರ್ಶನ
ದಾವಣಗೆರೆ, ಏಪ್ರಿಲ್ 05; ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ವತಿಯಿಂದ ಏಪ್ರಿಲ್ 7 ರಂದು ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು ಭಾಗವಹಿಸುತ್ತಿವೆ.
ನೇರ ಸಂದರ್ಶನದಲ್ಲಿ ಬಿಇ (ಸಿಎಸ್, ಇ&ಇ, ಇ&ಸಿ) ಮತ್ತು ಡಿಪ್ಲೊಮೋ (ಸಿಎಸ್, ಇ&ಇ, ಇ&ಸಿ) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಹೆಸರು ನೋಂದಾಯಿಸಿಕೊಂಡು, ಭಾಗವಹಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೈಸೂರಿನಲ್ಲಿ ಉದ್ಯೋಗ ಮೇಳ; ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಏಪ್ರಿಲ್ 7ರಂದು ಬೆಳಗ್ಗೆ 9 ರಿಂದ 5 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ಎಸ್. ಎಸ್. ಎಲ್. ಸಿ / ಪಿಯುಸಿ/ ಐಟಿಐ/ ಡಿಪ್ಲೊಮಾ/ ಬಿಇ/ ಯಾವುದೇ ಪದವಿ ಪಡೆದಿರಬೇಕು. ಉದ್ಯೋಗ ಮೇಳಕ್ಕೆ ಬರುವವರು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ಪಾಲ್ಗೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ +91 8277895931 ಸಂಖೆಗೆ ಕರೆ ಮಾಡಬಹುದಾಗಿದೆ. ರೆಸ್ಯುಮ್‌ಗಳನ್ನು [email protected] ಗೆ ಕಳಿಸಿ.
ಉದ್ಯೋಗ ಮೇಳ ನಡೆಯುವ ಸ್ಥಳ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಹುಣಸೂರು ರಸ್ತೆ, ಮೈಸೂರು 570006.
ಉಚಿತ ತರಬೇತಿಗೆ ಅರ್ಜಿ ಆಹ್ವಾನ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ (ರಿ) ಹಳಿಯಾಳದ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 10 ದಿನಗಳ ಕುರಿ ಸಾಕಣಿಕೆ ಬಗ್ಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸದ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಏಪ್ರಿಲ್ 7ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.
ತರಬೇತಿಯ ಸಮಯದಲ್ಲಿ ಊಟ, ವಸತಿ ಉಚಿತವಾಗಿರುತ್ತದೆ. ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರಧಿ ತಯಾರಿಕೆ ಬಗೆಗಿನ ಮಾಹಿತಿಯನ್ನು ನೀಡಲಾಗವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08284-295307, 220807, 9483485489, 9482188780, 9632225123ಗೆ ಸಂಪರ್ಕಿಸಬಹುದು.












Click it and Unblock the Notifications