ದಾವಣಗೆರೆ; ಡಿಸೆಂಬರ್ 27ರಂದು ವಾಕ್‌ ಇನ್ ಸಂದರ್ಶನ

ದಾವಣಗೆರೆ, ಡಿಸೆಂಬರ್ 26: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಡಿಸೆಂಬರ್ 27ರ ಮಂಗಳವಾರ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. ಆಸಕ್ತ ಯುವಕ/ ಯುವತಿಯರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಜಿಲ್ಲಾಡಳಿತ ಭವನದಲ್ಲಿರುವ ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆರಂಭವಾಗಲಿದೆ. ಆಸಕ್ತರು ಅಗತ್ಯ ದಾಖಲೆಗಳ ಜೊತೆ ಹಾಜರಾಗಬಹುದು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಕನಿಷ್ಠ 2 ರೆಸ್ಯೂಮ್, ಆಧಾರ್ ಕಾರ್ಡ್‌ ಜೊತೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಆಗಮಿಸಬೇಕು.

Walk In Interview At Davanagere On December 27

ಈ ನೇರ ಸಂದರ್ಶನದಲ್ಲಿ ಹಲವಾರು ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗೆ 08196-259446 ಅಥವ 6361550016 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಹಾಕಿ; ದಾವಣಗೆರೆ ಜಿಲ್ಲೆಯ ಮಾಯಾಕೊಂಡ ಹೋಬಳಿಯ ನಲ್ಕುಂದ ವೃತ್ತದ ಗ್ರಾಮ ಸಹಾಯಕರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ಡಿಸೆಂಬರ್‌ 28ರ ತನಕ ದಾವಣಗೆರೆ ತಹಶೀಲ್ದಾರ್ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಕಚೇರಿ ದಾವಣಗೆರೆ ಇವರನ್ನು ಸಂಪರ್ಕಿಸಬಹುದು.

ಇಂಟರ್ನಶಿಪ್ ತರಬೇತಿಗೆ ಅರ್ಜಿ ಆಹ್ವಾನ; ಬಳ್ಳಾರಿಯ ಕುಡುತಿನಿ ಪಟ್ಟಣ ಪಂಚಾಯಿತಿ ವತಿಯಿಂದ 2022-23ನೇ ಸಾಲಿನಲ್ಲಿ TULIP- The Urban Learning Internship Programme ಕಲಿಕಾ ಆಧಾರಿತವಾಗಿದ್ದು, ಇಂಟರ್ನಶಿಪ್ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಕುಡಿತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ. ಬಿ. ತೀರ್ಥಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಟ್ಟಣ ಪಂಚಾಯಿತಿಗೆ ಒಟ್ಟು 4 ಫಲಾನುಭವಿಗಳು ಅವಶ್ಯಕತೆಯಿದ್ದು, ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಕೆ ಮಾಡಲು https://internship.aicte-india.org ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 27. ಹೆಚ್ಚಿನ ಮಾಹಿತಿಗಾಗಿ ಕುಡುತಿನಿ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ನೀಡಬಹುದು ಅಥವಾ 08392-248025 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+