ಧಾರವಾಡ ಕೃಷಿ ವಿವಿ ನೇಮಕಾತಿ; ಮಾ. 28ಕ್ಕೆ ನೇರ ಸಂದರ್ಶನ
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ತಾತ್ಕಾಲಿಕವಾಗಿ ಸಂಯೋಜಕ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಇದಕ್ಕಾಗಿ ಮಾರ್ಚ್ 28ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 19; ಧಾರವಾಡ ಕೃಷಿ ವಿಶ್ವವಿದ್ಯಾಲಯ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಒಂದು ಸಂಯೋಜಕರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಕಾತಿ ನಡೆಯುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮಾರ್ಚ್ 28ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.
ನೇರ ಸಂರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಎಮ್‌ಎಸ್ ಕೃಷಿ (ಅಗ್ರಿ), ಬಿ. ಎಸ್ಸಿ, ಎಮ್ಎಸ್ಸಿ, ಎಮ್‌ಬಿಎ, ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 28ರಂದು ಬೆಳಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಆಸಕ್ತ, ಅರ್ಹರು ಹೆಚ್ಚಿನ ಮಾಹಿತಿಗಾಗಿ, www.uasd.edu ವೆಬ್‌ಸೈಟ್ ಮತ್ತು 9449809436 ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್ ಹೆಚ್. ಬಿ. ಬಬಲಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆ; ಪೊಲೀಸ್ ಅಧೀಕ್ಷಕರು ಹಾಗೂ ಅಧ್ಯಕ್ಷರು, ಗೃಹರಕ್ಷಕ ಆಯ್ಕೆ ಸಮಿತಿ, ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ಮತ್ತು ನವಲಗುಂದ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಅರ್ಹ ಸ್ಥಳೀಯ ಪುರುಷ, ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಜಿಲ್ಲಾ ಸಮಾದೇಷ್ಟರು, ಗೃಹರಕ್ಷಕದಳ ಕಛೇರಿ, ಡಿ.ಎ.ಆರ್., ಪೊಲೀಸ್ ಹೆಡ್ ಕ್ವಾರ್ಟಸ್ಸ್ ಆವರಣ ಧಾರವಾಡ ಇಲ್ಲಿ ಏಪ್ರಿಲ್ 1 ರಿಂದ 15ರ ವರೆಗೆ ಉಚಿತವಾಗಿ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 29ರೊಳಗಾಗಿ ಸಲ್ಲಿಸಿ ಸ್ವೀಕೃತಿಯನ್ನು ಪಡೆಯಬೇಕು.
ಗೃಹರಕ್ಷಕ ಸ್ವಯಂ ಸೇವಕ ಸ್ಥಾನಗಳು ಧಾರವಾಡದಲ್ಲಿ 26 ಪುರುಷ, 8 ಮಹಿಳಾ. ಹುಬ್ಬಳ್ಳಿಯಲ್ಲಿ 10 ಪುರುಷ, 5 ಮಹಿಳಾ. ನವಲಗುಂದ 1 ಮಹಿಳೆ ಸೇರಿ ಒಟ್ಟು 50 ಗೃಹರಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಸಂದರ್ಶನ ಮತ್ತು ದೈಹಿಕ ಸಾಮರ್ಥ್ಯದ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕವಾಗಿ ಯಾರಿಗೂ ಮಾಹಿತಿ ತಿಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಮಾದೇಷ್ಟರು (ಕಮಾಂಡೆಂಟ್), ಹೋಂಗಾಡ್ರ್ಸ್ ಕಛೇರಿ, ಪೊಲೀಸ್ ಹೆಡ್ ಕ್ವಾರ್ಟ್‍ಸ್ ಆವರಣ, ಧಾರವಾಡ 580008 ಇವರನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ 0836-2442496, ಸಹಾಯಕ ಆಡಳಿತಾಧಿಕಾರಿಗಳು, ಪೊಲೀಸ್ ಅಧೀಕ್ಷಕರ ಕಛೇರಿ ಧಾರವಾಡ 0836-2233205.












Click it and Unblock the Notifications