ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ ಕೃಷಿ ವಿವಿಯಲ್ಲಿ ಆ. 16, 19ರಂದು ನೇರ ಸಂದರ್ಶನ

|
Google Oneindia Kannada News

ಧಾರವಾಡ, ಆಗಸ್ಟ್ 04; ಧಾರವಾಡ ಕೃಷಿ ವಿಶ್ವವಿದ್ಯಾಲಯವು ವಿವಿಧ ಹುದ್ದೆಗಳ ಭರ್ತಿಗೆ ಆಗಸ್ಟ್ 16 ಮತ್ತು 19ರಂದು ನೇರ ಸಂದರ್ಶನ ಆಯೋಜನೆ ಮಾಡಿದೆ. ಆಸಕ್ತ, ಅರ್ಹರು ಇದರ ಸದುಪಯೋಗ ಪಡೆಯಬಹುದಾಗಿದೆ.

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್ ಯೋಜನೆಯಡಿ ವಿಜಯಪುರ, ಮುಧೋಳ ಮತ್ತು ಬೆಳಗಾವಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳಲ್ಲಿ ಪೆಸಿಲಿಟೇಟರ್ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಬೀದರ್‌ನಲ್ಲಿ ಅಗ್ನಿಪಥ್ ನೇಮಕಾತಿ ರ‍್ಯಾಲಿ ಬೀದರ್‌ನಲ್ಲಿ ಅಗ್ನಿಪಥ್ ನೇಮಕಾತಿ ರ‍್ಯಾಲಿ

ಇದಕ್ಕಾಗಿ ಆಗಸ್ಟ್ 19ರಂದು ಬೆಳಗ್ಗೆ 11 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವದ್ಯಾಲಯ ಧಾರವಾಡದಲ್ಲಿ ನೇರ ಸಂದರ್ಶನ ಕರೆಯಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

Walk In Interview At Dharwad On August 16 And 19

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೃಷಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.uasd.edu ಭೇಟಿ ನೀಡಬಹುದು. ದೂರವಾಣಿ 0836-2442464 ಗೆ ಸಂಪರ್ಕಿಸಬಹುದು.

ಕೊಪ್ಪಳ; ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಪ್ಪಳ; ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಗಸ್ಟ್ 16ರಂದು ಸಂದರ್ಶನ; ಕೃಷಿ ವಿಶ್ವವಿದ್ಯಾಲಯವು ಪ್ರೊಜೆಕ್ಟ್ ಅಸೋಷಿಯೆಟ್ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗೆ ಆಗಸ್ಟ್ 16 ರಂದು ನೇರ ಸಂದರ್ಶನ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವದ್ಯಾಲಯ ಧಾರವಾಡದಲ್ಲಿ ನೇರ ಸಂದರ್ಶನ ನಡೆಯಲಿದೆ. ಕರೆಯಲಾಗಿದೆ. ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಆಗಸ್ಟ್‌ 6ರಂದು ಮಿನಿ ಉದ್ಯೋಗ ಮೇಳ ಶಿವಮೊಗ್ಗದಲ್ಲಿ ಆಗಸ್ಟ್‌ 6ರಂದು ಮಿನಿ ಉದ್ಯೋಗ ಮೇಳ

ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ವೆಬ್‍ಸೈಟ್‌ಗೆ ಭೇಟಿ ನೀಡಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 0836-2442464.

ಉದ್ಯೋಗಕ್ಕಾಗಿ ಸಾಲ ಸೌಲಭ್ಯ; ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಕರೆದಿದೆ.

ಆಸಕ್ತರು ಆನ್‍ಲೈನ್ ಮೂಲಕ ಮಾತ್ರ kacdc.karnataka.gov.in ವೆಬ್ ಸೈಟ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 11 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸುವವರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು).

ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಯು ಜೋಡಣೆಯಾಗಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3 ಲಕ್ಷಗಳ ಮಿತಿಯೊಳಗಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಪಡೆಯಲು ಅರ್ಹರು.

ಯೋಜನೆಯಡಿ ಕನಿಷ್ಠ 50 ಸಾವಿರಗಳಿಂದ ಗರಿಷ್ಠ 1 ಲಕ್ಷಗಳ ಸಾಲ ಸಿಗಲಿದೆ.ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ. 80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತದೆ.

2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಈಗಾಗಲೇ ಬೇರೆ ಯಾವುದೇ ನಿಗಮಗಳ ಯೋಜನೆಗಳಲ್ಲಿ ಅಥವಾ ಈ ನಿಗಮದಲ್ಲೇ ಈ ಹಿಂದೆ ಸಾಲ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿ ಹಾಗೂ ಅವರ ಕುಟುಂಬ ಸಾಲ ಸೌಲಭ್ಯ ಪಡೆಯಲು ಅರ್ಹವಲ್ಲ.

ಯೋಜನೆಗಳ ಮಾರ್ಗಸೂಚಿ, ಸಲ್ಲಿಸಬೇಕಾದ ದಾಖಲೆಗಳು ಮುಂತಾದ ಮಾಹಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವ 08392-267038 ಸಂಖ್ಯೆಗೆ ಕರೆ ಮಾಡಿ.

English summary
Walk in interview at University of Agricultural Sciences, Dharwad on August 16 and 19, 2022. Interested candidates can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X