ಧಾರವಾಡದಲ್ಲಿ ಡಿಸೆಂಬರ್ 12ರಂದು ನೇರ ಸಂದರ್ಶನ

ಧಾರವಾಡ, ಡಿಸೆಂಬರ್ 01; ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ಡಿಸೆಂಬರ್‌ 12ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು ಕಡ್ಡಾಯವಾಗಿ 18 ರಿಂದ 50 ವರ್ಷಗಳೊಳಗಿನವರಾಗಿರಬೇಕು.

ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು ಪಾಲ್ಗೊಳ್ಳಬಹುದು.

Walk In Interview At Dharwad On December 12

ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ರೂ. 5,000ವನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಷನ್ ನೀಡಲಾಗುತ್ತೆ. ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಡಿಸೆಂಬರ್ 12ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ವಿಳಾಸ; ಧಾರವಾಡ ಕೆ. ಸಿ. ಪಾರ್ಕ್ ಹತ್ತಿರ ಇರುವ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದೆಂದು ಧಾರವಾಡ ವಿಭಾಗಾದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+