ಧಾರವಾಡ: ಗುತ್ತಿಗೆ ಆಧಾರದ ನೇಮಕಾತಿ, ನೇರ ಸಂದರ್ಶನ
ಧಾರವಾಡ, ಜೂನ್ 12: ಧಾರವಾಡದ ಜಿಲ್ಲಾ ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಹಾಗೂ ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ನೇಮಕಾತಿಗಾಗಿ ಮಾಡಿಕೊಳ್ಳುತ್ತಿದೆ. ಅಭ್ಯರ್ಥಿಗಳು ಜೂನ್ 18ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 2 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಯನ್ನು ನೇರ ಸಂದರ್ಶನ ಮುಖಾಂತರ ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.
ಎಂ. ಬಿ. ಬಿ. ಎಸ್ ವಿದ್ಯಾರ್ಹತೆ ಅಥವಾ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಹೊಂದಿದ ಆಸಕ್ತ ಅಭ್ಯರ್ಥಿಗಳು ಜೂನ್ 18, 2024ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಗವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೆ. ಸಿ. ಪಾರ್ಕ್ ಹತ್ತಿರ ಧಾರವಾಡ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನಕ್ಕೆ ಬರುವವರು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲ ಮೂಲ ದಾಖಲಾತಿಗಳನ್ನು ತರಬೇಕು. ಸ್ಥಳದಲ್ಲಿಯೇ ಅರ್ಜಿಯನ್ನು ನೇರವಾಗಿ ಸಲ್ಲಿಸಬಹುದಾಗಿದೆ. ಅರ್ಜಿಯೊಂದಿಗೆ ಎಲ್ಲ ದಾಖಲಾತಿಗಳ ನಕಲು ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ತಿಳಿಸಿದ್ದಾರೆ.
ಖಾಲಿ ಇರುವ ವೈದ್ಯ ಹುದ್ದೆಗಳ ವಿವರ: ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ (2) ಹುದ್ದೆಗಳು, ಶಸ್ತ್ರಚಿಕತ್ಸಾ ತಜ್ಞವೈದ್ಯರ (ಜನರಲ್ ಸರ್ಜನ್-2) ಹುದ್ದೆ, ಸ್ತ್ರೀ ರೋಗ ತಜ್ಞ ವೈದ್ಯರ (ಗೈನಿಕಾಲೋಜಿಸ್ಟ-2) ಹುದ್ದೆಗಳು.
ಅರವಳಿಕೆ ತಜ್ಞ ವೈದ್ಯರ (ಅನೆಸ್ತಿಶಿಯಾ-1) ಹುದ್ದೆ, ಚಿಕ್ಕ ಮಕ್ಕಳ ತಜ್ಞ ವೈದ್ಯರ (ಪಿಡಿಯಾಟ್ರಿಕ್-1) ಹುದ್ದೆ, ಕ್ಷ-ಕಿರಣ ತಜ್ಞ ವೈದ್ಯರ (ರೇಡಿಯೋಲಾಜಿಸ್ಟ್-3) ಹುದ್ದೆಗಳು, ನೇತ್ರ ತಜ್ಞ ವೈದ್ಯರ (ಆಪ್ತಾಲೋಮೊಜಿಸ್ಟ್-1) ಹುದ್ದೆ, ಎಲಬು ಕೀಲು ತಜ್ಞ ವೈದ್ಯರ (ಅರ್ಥೋಪಿಡಿಕ ಸರ್ಜನ್-1) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಬಳ್ಳಾರಿಯಲ್ಲಿ ನೇರ ಸಂದರ್ಶನ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂನ್ 14ರಂದು ಬೆಳಗ್ಗೆ 9 ಗಂಟೆಗೆ ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ.
ಬೆಂಗಳೂರಿನ ಹೊಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟೀಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು.
ಸಂದರ್ಶನದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್‍ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ಮತ್ತು ತಪ್ಪದೇ ಸ್ಮಾರ್ಟ್ ಮೊಬೈಲ್ ಅನ್ನು ತರಬೇಕು.
18 ವರ್ಷ ಮೇಲ್ಪಟ್ಟವರು ಅರ್ಹರಾಗಿರುತ್ತಾರೆ. ಜೂನ್ 14ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದೆ. ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.












Click it and Unblock the Notifications