ಗದಗ; ಅಂಚೆ ವಿಮೆ ಪ್ರತಿನಿಧಿಗಳ ಆಯ್ಕೆಗೆ ಮೇ 30ರಂದು ನೇರ ಸಂದರ್ಶನ
ಗದಗ, ಮೇ 29; ಅಂಚೆ ಅಧೀಕ್ಷಕರು ಗದಗ ವಿಭಾಗ, ಗದಗ ಮೇ 30ರ ಮಂಗಳವಾರ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಆಸಕ್ತ ಮತ್ತು ಅರ್ಹ 18 ರಿಂದ 50 ವರ್ಷದ ಒಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ಹೇಳಿದೆ.
ಅಂಚೆ ಅಧೀಕ್ಷಕರು ಗದಗ ವಿಭಾಗ ಇವರು ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ನೇರ ಸಂದರ್ಶನವನ್ನು ಆಯೋಜನೆ ಮಾಡಿದ್ದಾರೆ.

ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು 10 ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ರಿಂದ 50 ವರ್ಷದ ಒಳಗಿನವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಸಲಹೆಗಾರರು ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ನಿಗದಿತ ವೇತನವಿಲ್ಲ; ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು ಹಾಗೂ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ ಸಂಸ್ಥೆ ಸಂಘಗಳ ಏಜೆಂಟ್ ಆಗಿರಬಾರದು.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 30ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನಕ್ಕೆ ಆಗಮಿಸಬಹುದು ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಸಂದರ್ಶನ ಗದಗ ಎಪಿಎಂಸಿ ಯಾರ್ಡ್ ಚೇಂಬರ್ ಆಫ್ ಕಾಮರ್ಸ್ ಎದುರು ಇರುವ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ.
ತರಬೇತಿಗಾಗಿ ಅರ್ಜಿ ಹಾಕಿ; ಶಿವಮೊಗ್ಗದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆ ಜುಲೈ 1 ರಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯನ್ನು ಆರಂಭಿಸಲಿದೆ. ಇದಕ್ಕಾಗಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ/ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31. ಅಭ್ಯರ್ಥಿ ಕನಿಷ್ಠ ಎಸ್. ಎಸ್. ಎಲ್. ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ.
ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ವಿನೋಬನಗರ ಇಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873 ಹಾಗೂ 7022429440 ಅನ್ನು ಸಂಪರ್ಕಿಸಬಹುದು.












Click it and Unblock the Notifications