ಕೊಪ್ಪಳ; ಡಿ.21ರಂದು ವಾಕ್ ಇನ್ ಇಂಟರ್‌ ವ್ಯೂವ್

ಕೊಪ್ಪಳ, ಡಿಸೆಂಬರ್ 19; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 21ರಂದು ಗಂಗಾವತಿಯಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. ಅಭ್ಯರ್ಥಿಗಳು ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಗಂಗಾವತಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಾಕ್ ಇನ್ ಇಂಟರ್‌ವ್ಯೂ ಆಯೋಜಿಸಲಾಗಿದೆ. ಈ ವಾಕ್ ಇನ್ ಸಂದರ್ಶನದಲ್ಲಿ ಅತಿಥಿ ಬೋಧಕರ ಹುದ್ದೆಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

Walk In Interview At Gangavathi On December 21

ವಾಕ್ ಇನ್ ಸಂದರ್ಶನಕ್ಕೆ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 21 ವರ್ಷ ಮೇಲ್ಪಟ್ಟ ಐಟಿಐ ಎಲೆಕ್ಟ್ರೀಷಿಯನ್ (ಅಂಪ್ರೆಂಟಿಶಿಪ್ ಹಾಗೂ ಕನಿಷ್ಟ 2 ವರ್ಷದ ಅನುಭವ) ಅಥವಾ ಡಿಪ್ಲೋಮಾ-ಎಲೆಕ್ಟ್ರಿಕಲ್ ಜೊತೆಗೆ ಕನಿಷ್ಟ 2 ವರ್ಷದ ಅನುಭವ ಅಥವಾ ಬಿ.ಇ.-ಎಲೆಕ್ಟ್ರಿಕಲ್ ಜೊತೆಗೆ ಕನಿಷ್ಟ 2 ವರ್ಷದ ಅನುಭವವುಳ್ಳ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್‌ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8105693234.

ಅಪ್ರೆಂಟಿಸ್ ತರಬೇತಿ; ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 26ರ ತನಕ ವಿಸ್ತರಣೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅವರು ಪಡೆದಿರುವ ಅಂಕ, ಸಂದರ್ಶನದಲ್ಲಿ ಪಡೆದ ಅಂಕ ಹಾಗೂ ಕಂಪ್ಯೂಟರ್ ಬಳಕೆ ಜ್ಞಾನ ಮತ್ತು ಕನ್ನಡ ಭಾಷೆ ಬಳಕೆ ಪ್ರಬುದ್ಧತೆ ಆಧಾರದ ಮೇಲೆ ಮೆರಿಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂ. ಸ್ಟೈಫೆಂಡ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನಾತ್ಮಕ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. 35 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ.

ಆಸಕ್ತ ಅಭ್ಯರ್ಥಿಗಳು ಅರ್ಜಿಯೊಂದಿಗೆ ತಮ್ಮ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೋರ್ಟ್‌ ಅಳತೆಯ ಭಾವಚಿತ್ರ ಸೇರಿದಂತೆ ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದಿನಾಂಕ 26/12/2023 ರೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಬಳ್ಳಾರಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+