ಕೊಪ್ಪಳ; ನವೆಂಬರ್ 4ರಂದು ವಾಕ್ ಇನ್ ಇಂಟರ್ ವ್ಯೂ
ಕೊಪ್ಪಳ, ನವೆಂಬರ್ 02: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಗಂಗಾವತಿಯಲ್ಲಿ ನವೆಂಬರ್ 4ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 19 ರಿಂದ 30 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ನ್ಯೂ ಫ್ರಂಟ್‌ಲೈನ್ ಬಜಾರ್ ಪ್ರೈವೇಟ್ ಲಿಮಿಟೆಡ್ ಬೆರೋನಿ ಮಸೀದಿ ಕಾಂಪ್ಲೆಕ್ಸ್, ಶಾದಿಮಹಲ್ ಪಕ್ಕದಲ್ಲಿ, ಬಸ್‌ಸ್ಟಾಂಡ್ ರೋಡ್ ಗಂಗಾವತಿಯಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2ರ ವರೆಗೆ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ.

ವಿವಿಧ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತಿದೆ. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಅಭ್ಯರ್ಥಿಗಳು ಪಿಯುಸಿ, ತತ್ಸಮಾನ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳಿಗೆ ಸೂಚನೆ; ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 19 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 8105693234.
ಶಿವಮೊಗ್ಗದಲ್ಲಿ ನೇರ ಸಂದರ್ಶನ; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 8 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿಎಸ್ ಪದವೀಧರರಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಆಸಕ್ತರು ದಿನಾಂಕ 06/11/2023 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲಕ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸುವುದು.












Click it and Unblock the Notifications