ಹಾಸನ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಸೆ. 27ಕ್ಕೆ ನೇರ ಸಂದರ್ಶನ
ಹಾಸನ, ಸೆಪ್ಟೆಂಬರ್ 25: ಹಾಸನ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿ. ವಿವಿಧ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 27ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಅಲ್ಲದೇ ಒಪ್ಪಂದದ ಮೇರೆಗೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗಾಗಿ ವಿವರಗಳು ಇಲ್ಲಿವೆ.
ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರ ಹಾಸನ ವತಿಯಿಂದ ಸೆಪ್ಟೆಂಬರ್ 27ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಅಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 1.30ರ ತನಕ ಯುನಿಟ್‌ಫೋರ್ಸ್ ಟೆಕ್ನಾಲಜೀಸ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತಿದೆ.

ಈ ನೇರ ಸಂದರ್ಶನದಲ್ಲಿ ಐಟಿಐ/ ಡಿಪ್ಲೊಮಾ ಹೊಂದಿದ ಪದವಿ ಪಡೆದಿರುವ ಪುರುಷ/ ಮಹಿಳಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ವಯೋಮಿತಿ 18 ರಿಂದ 35 ವರ್ಷಗಳು. ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಿ ಉಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.
ಆಸಕ್ತರು www.ncs.gov.in ವೆಬ್ ಪೋರ್ಟಲ್‌ನಲ್ಲಿ ಉದ್ಯೋಗಾಕಾಂಕ್ಷಿಯಾಗಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ದೂರವಾಣಿ ಸಂಖ್ಯೆ 08172-296374, 8722606874 ಮೂಲಕ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ವಿವಿಧ ಹುದ್ದೆಗಳು ಅರ್ಜಿ ಆಹ್ವಾನ: ರಾಷ್ಟ್ರೀಯ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹಾಸನ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪೂರ್ಣಾವಧಿ ಕಾನೂನು ನೆರವು ಪ್ರತಿವಾದಿ ವಕೀಲರ ವ್ಯವಸ್ಥೆ ಕಛೇರಿಯನ್ನು ಸ್ಥಾಪಿಸಲಾಗಿದೆ.
ಈ ವ್ಯವಸ್ಥೆಯಲ್ಲಿ ಒಪ್ಪಂದದ ಮೇರೆಗೆ ಕೆಲಸ FC Deputy Chief Legal Ald Defense Counsel -2, Assistant Legal Aid Defense Counsel - 5 ಹುದ್ದೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಕೆಲಸ ನಿರ್ವಹಿಸಲು ಕಛೇರಿ ಸಹಾಯಕ-2 ಹುದ್ದೆ, ಕಛೇರಿ ಜವಾನರು-2 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03.10.2024. ಅರ್ಜಿಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯಲ್ಲಿ ಪಡೆದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಸನದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ ಸಂಪರ್ಕಿಸಿ.
ಧಾರವಾಡದಲ್ಲಿಯೂ ಕೆಲಸ ಖಾಲಿ ಇದೆ: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 2 ಉಪ ಕಾನೂನು ನೆರವು ಅಭಿರಕ್ಷಕರು, 4 ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳಿಗೆ ನ್ಯಾಯವಾದಿಗಳಿಂದ ಹಾಗೂ 2 ಸಹಾಯಕ ಮತ್ತು 2 ಕಛೇರಿ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 3, 2024ರ ತನಕ ಭರ್ತಿಮಾಡಿದ ಅರ್ಜಿಗಳನ್ನು ಧಾರವಾಡ ಎಡಿಆರ್ ಕಟ್ಟಡ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಬಿ. ಜಿ. ರಮಾ ತಿಳಿಸಿದ್ದಾರೆ.












Click it and Unblock the Notifications