ಕಲಬುರಗಿ; ಜೂನ್ 2ರಂದು ನೇರ ಸಂದರ್ಶನ

ಕಲಬುರಗಿ, ಜೂನ್ 01; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 2 ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ವಯೋಮಿತಿ 21 ರಿಂದ 25 ವರ್ಷಗಳು.

ಜೂನ್ 2ರ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ನಗರದ ಎಮ್. ಎಸ್. ಕೆ. ಮಿಲ್ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಪಾಲ್ಗೊಳ್ಳಬಹುದು.

Walk In Interview At Kalaburagi Employment Exchange Office On June 2

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದು, ಐಸಿಐಸಿಐ ಬ್ಯಾಂಕ್‍ನಲ್ಲಿ ರಿಲೇಷನ್‍ಶಿಫ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಜೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‍ದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ 08472-274846, 9620095270.

ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ; ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲಸಂಜೀವಿನಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಮಾಡಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಸಂಯೋಜನಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಲಾನಯನ ಮತ್ತು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಕುರಿತು ಅನುಭವ ಹೊಂದಿರುವ ಬಿ.ಎಸ್ಸಿ. (ಅಗ್ರಿ) ಅಥವಾ ಬಿ. ಟೆಕ್. (ಅಗ್ರಿಕಲ್ಚರ್ ಇಂಜಿನಿಯರಿಂಗ್) ಪದವೀಧರರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಗರಿಷ್ಠ 65 ವರ್ಷ.

ಸಮಾಲೋಚಕರಾಗಿ ಆಯ್ಕೆಯಾದವರಿಗೆ ಪ್ರತಿ ಮಾಸಿಕ ರೂ. 50,000 ಹಾಗೂ ರೂ. 5000 ಪ್ರಯಾಣ ಭತ್ಯ ನೀಡಲಾಗುತ್ತದೆ. ಆಸಕ್ತರು ಜೂನ್ 14ರ ತನಕ ಅರ್ಜಿ ಸಲ್ಲಿಸಬಹುದ.

ಜಿಲ್ಲಾ ಮಟ್ಟದ ಸಮಿತಿ 3 ವ್ಯಕ್ತಿಗಳನ್ನು ಆಯ್ಕೆ ಮಾಡಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯಕ್ಕೆ ನಾಮನಿರ್ದೇಶನ ಮಾಡಲಿದೆ. ರಾಜ್ಯ ಮಟ್ಟದ ಸಮಿತಿ ಸಂದರ್ಶನದ ಮೂಲಕ ಓರ್ವ ವ್ಯಕ್ತಿಯನ್ನು ಅಂತಿಮವಾಗಿ ಆಯ್ಕೆ ಮಾಡಲಿದೆ.

ಆಸಕ್ತ ಮತ್ತು ಅರ್ಹರು ಅರ್ಜಿ ಹಾಗೂ ಇನ್ನಿತರ ಮಾಹಿತಿಗಾಗಿ ಜಿಲ್ಲಾ ಪಂಚಾಯತಿ ಕಾರ್ಯಾಲಯದ ನರೇಗಾ ಶಾಖೆ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 08194-223058ಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+