ಕಲಬುರಗಿ; ಆಗಸ್ಟ್ 6ರಂದು ವಿವಿಧ ಹುದ್ದೆಗೆ ನೇರ ಸಂದರ್ಶನ

ಕಲಬುರಗಿ, ಆಗಸ್ಟ್ 05; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಗಸ್ಟ್ 6ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಕಲಬುರಗಿ ಸರ್ಕಾರಿ ಐಟಿಐ ಕಚೇರಿ ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.

ವಿವಿಧ ಕಂಪನಿಗಳಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Walk In Interview At Kalaburagi On August 6th

ಕಲಬುರಗಿಯ ಫ್ಲಿಪ್‌ಕಾರ್ಟ್‌ನಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ 30 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20ರಿಂದ 45 ವರ್ಷಗಳು. ಡ್ರೈವಿಂಗ್ ಲೈಸನ್ಸ್ ಮತ್ತು ಬೈಕ್ ಹೊಂದಿರುವ ಪುರುಷ ಅಭ್ಯರ್ಥಿಗಳು ಮಾತ್ರ ಸಂರ್ದಶನಕ್ಕೆ ಹಾಜರಾಗಬೇಕು.

ಹೈದ್ರಾಬಾದ್‍ನ ಡಿ-ಮಾರ್ಟ್‍ದಲ್ಲಿ ಕ್ಯಾಷಿಯರ್ 100 ಹುದ್ದೆಗಳಿಗೆ ನೇಮಕಾತಿ ಇದೆ. ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಪ್ಯಾಕರ್ 100 ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷಗಳು. ಈ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್‍ಗಳೊಂದಿಗೆ ಹಾಜರಾಗಬೇಕು. ಈ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಅಥವ ದೂರವಾಣಿ ಸಂಖ್ಯೆ 08472-274846ಗೆ ಕರೆ ಮಾಡಬಹುದಾಗಿದೆ.

ತರಬೇತಿಗೆ ಅರ್ಜಿ ಹಾಕಿ; ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಮಾರ್ಗಸೂಚಿಯಂತೆ ಕೌಶಲ್ಯ ಕರ್ನಾಟಕ ಯೋಜನೆಯಡಿ ಕೆ.ಜಿ.ಎಂ.ಎಸ್.ಡಿ.ಸಿ. ಮುಖಾಂತರ ಅನುಷ್ಠಾನಗೊಂಡಿರುವ ಕಲಬುರಗಿಯ ಕರ್ನಾಟಕ ಜರ್ಮನ್ ತಾಂತ್ರಿಕ ತಾಂತ್ರಿಕ ತರಬೇತಿ (ಕೆ.ಜಿ.ಟಿ.ಟಿ.ಐ.) ಸಂಸ್ಥೆಯಲ್ಲಿ ಉದ್ಯೋಗಾಧಾರಿತ ಕೆಳಕಂಡ ಅಲ್ಪಾವಧಿ ಕೋರ್ಸ್‍ಗಳಿಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಟ್ಯಾಲಿ ಇಆರ್‍ಪಿ 9/ ಅಕೌಂಟ್ಸ್ ಎಕ್ಸಿಕ್ಯೂಟಿವ್, ಮಾಸ್ಟರ್ ಕ್ಯಾಮ್, ಸಿಎನ್‍ಸಿ ಪ್ರೋಗ್ರಾಮಿಂಗ್ ಆಂಡ್ ಒಪರೇಶನ್-ಮಿಲ್ಲಿಂಗ್, ಸಿಎನ್‍ಸಿ ಪ್ರೋಗ್ರಾಮಿಂಗ್ ಆಂಡ್ ಒಪರೇಶನ್-ಟರ್ನಿಂಗ್, ಸಿಎನ್‍ಸಿ ಪ್ರೋಗ್ರಾಮಿಂಗ್ ಆಂಡ್ ಒಪರೇಶನ್-ಮಿಲ್ಲಿಂಗ್ ಆಂಡ್ ಟರ್ನಿಂಗ್ ಹಾಗೂ ಆಟೋಕ್ಯಾಡ್ ಆಂಡ್ ಕ್ಯಾಟಿಯಾ ಅಲ್ಪಾವಧಿ ಕೋರ್ಸ್‍ಗಳಿಗೆ ತರಬೇತಿ ನೀಡಲಾಗುತ್ತದೆ.

ಆಸಕ್ತರು ಕಲಬುರಗಿಯ ಕೆ.ಜಿ.ಟಿ.ಟಿ.ಐ. ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಸದರಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 08472-252111, 9071423004/05.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+