ಕಲಬುರಗಿ; ಜನವರಿ 25ರಂದು ನೇರ ಸಂದರ್ಶನ
ಮಂಗಳೂರು, ಜನವರಿ 22; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 25ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ನಗರದ ಸರ್ಕಾರಿ ಐಟಿಐ ಕಾಲೇಜಿನ ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 25 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನೇರ ಸಂದರ್ಶನದಲ್ಲಿ ಫ್ಲಿಪ್‍ಕಾರ್ಟ್‍ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಬೈಕ್ ಹಾಗೂ ಡಿಎಲ್ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಶ್ರೀ ಶಿವಾ ಎಂಟರ್‌ಪ್ರೈಸಸ್ (ಏರ್‍ಟೆಲ್ ಪೇಮೆಂಟ್ ಬ್ಯಾಂಕ್)ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ., ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷಗಳು.
ನೇರ ಸಂದರ್ಶನದಲ್ಲಿ ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಜೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳನ್ನು ತರಬೇಕು ಎಂದು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846.
ವಿವಿಧ ಯೋಜನೆಗೆ ಅರ್ಜಿ ಆಹ್ವಾನ; ಕಲಬುರಗಿ ಜಿಲ್ಲೆಯ ಆಳಂದ ಪುರಸಭೆಯಲ್ಲಿ 2022-23ನೇ ಸಾಲಿಗೆ ಅನುಷ್ಠಾನದಲ್ಲಿರುವ ಡೇ-ನಲ್ಮ್ ಯೋಜನೆಯಡಿ ಉಪಯೋಜನೆಯಾದ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳನಿಯುಕ್ತಿ ಕಾರ್ಯಕ್ರಮದಡಿ ಕೆಳಕಂಡ ತರಬೇತಿ ಪಡೆಯಲು ಆಳಂದ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ಹಾಗೂ ಫ್ರಂಟ್ ಆಫೀಸ್ ಟ್ರೇನಿ ತರಬೇತಿ ಪಡೆಯಲು ದ್ವಿತೀಯ ಪಿಯುಸಿ ಪಾಸಾಗಿರಬೇಕು ಹಾಗೂ ಸಿವಿಂಗ್ ಮಶೀನ್ ಆಪರೇಟರ್ ತರಬೇತಿ ಪಡೆಯಲು 5ನೇ ತರಗತಿ ಪಾಸಾಗಿರಬೇಕು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಆದಾಯ, ಆಧಾರ್ ಕಾರ್ಡ್, ಪಡಿತರ ಚೀಟಿ, ವಿದ್ಯಾರ್ಹತೆ ಅಂಕಪಟ್ಟಿ ದಾಖಲೆಗಳನ್ನು ಲಗತ್ತಿಸಿ 2023ರ ಫೆಬ್ರವರಿ 6 ರೊಳಗಾಗಿ ಆಳಂದ ಪುರಸಭೆ ಕಚೇರಿಯಲ್ಲಿ ಕಚೇರಿ ಸಮಯದಲ್ಲಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಆಳಂದ ಪುರಸಭೆಯ ಕಚೇರಿಯಲ್ಲಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಲು ಕೋರಲಾಗಿದೆ.












Click it and Unblock the Notifications