ಕಲಬುರಗಿ; ಸೆಪ್ಟೆಂಬರ್ 20ರಂದು ನೇರ ಸಂದರ್ಶನ
ಕಲಬುರಗಿ, ಸೆಪ್ಟೆಂಬರ್ 18; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸೆಪ್ಟೆಂಬರ್ 20ರಂದು ನೇರ ಸಂದರ್ಶನ ನಡೆಯಲಿದೆ. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ರಿಲೆಷನ್‍ಶಿಪ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 20ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶವನ್ನು ಆಯೋಜನೆ ಮಾಡಲಾಗಿದೆ.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕಿನವರು ಭಾಗವಹಿಸುತ್ತಿದ್ದು, ಅಭ್ಯರ್ಥಿಗಳು ಯಾವುದೇ ಪದವೀಧರ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 26 ವರ್ಷದೊಳಗಿರಬೇಕು.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ 08472-274846.
ಮಿನಿ ಉದ್ಯೋಗ ಮೇಳ; ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 22ರಂದು ಬೆಳಗ್ಗೆ 10.30ಕ್ಕೆ ರಜತಾದ್ರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಆಯೋಜನೆ ಮಾಡಲಾಗಿದೆ.
ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8105618291, 9945856670, 8197440155 ಹಾಗೂ 9901472710.
ನೇರ ಸಂದರ್ಶನ; ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಸಂಶೋಧನಾ ಫೆಲೋ ಒಂದು ತಾತ್ಕಾಲಿಕ ಹುದ್ದೆಯ ಭರ್ತಿಗೆ ಸೆಪ್ಟೆಂಬರ್ 23ರ ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 31 ಸಾವಿರ ರೂ. ವೇತನ ಹಾಗೂ ಮನೆಭತ್ಯೆ ನೀಡಲಾಗುತ್ತದೆ. ಕೃಷಿ ಕೀಟಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಡಾ. ಪೂರ್ಣಿಮಾ ಮಟ್ಟಿ, ವಿಜ್ಞಾನಿ ಕೃಷಿ ಸಂಶೋಧನಾ ಕೇಂದ್ರ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9480410923.












Click it and Unblock the Notifications