ಕೊಪ್ಪಳ, ದಾವಣಗೆರೆಯಲ್ಲಿ ಸೆ. 8ರಂದು ನೇರ ಸಂದರ್ಶನ
ಕೊಪ್ಪಳ, ಸೆಪ್ಟೆಂಬರ್ 07; ಉದ್ಯೋಗ ಹುಡುಕುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿಯೊಂದಿದೆ. ಸೆಪ್ಟೆಂಬರ್ 8ರ ಶುಕ್ರವಾರ ದಾವಣಗೆರೆ ಮತ್ತು ಕೊಪ್ಪಳದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಲಾಗಿದೆ.
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ತನಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ.

ಈ ವಾಕ್ ಇನ್ ಇಂಟರ್‌ವ್ಯೂನಲ್ಲಿ ಪ್ರನಾರ್ಥ ಟೆಕ್ನಾಲಜೀಜ್. ಎಲ್.ಎಲ್.ಪಿ ಹುಬ್ಬಳ್ಳಿ, ಎಲ್ & ಟಿ ಫೈನಾನ್ಸ್ ಕೊಪ್ಪಳ, ಪೆಟಿಯಂ ಕೊಪ್ಪಳ, ನ್ಯೂ ಅಪಾರ್ಚುನಿಟಿ ಕೊಪ್ಪಳ ಇವರು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ನೇರ ಸಂದರ್ಶನದಲ್ಲಿ ಪಿಯುಸಿ ಮತ್ತು ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ, ಪ್ರವೇಶ ಉಚಿತವಾಗಿದೆ.
ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ 18 ರಿಂದ 32 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಯುವಕರು ಮಾತ್ರ ಪಾಲ್ಗೊಳ್ಳಬೇಕು. ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ.
ಆಸಕ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 8105693234, 6361143422.
ದಾವಣಗೆರೆಯ ಉದ್ಯೋಗ ಮಾಹಿತಿ; ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51ರಲ್ಲಿ ವಿವಿಧ ಹುದ್ದೆಗಳ ಆಯ್ಕೆಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಹಲವು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿವೆ. ವಿವಿಧ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಸ್ಥಳ ಮತ್ತು ಸಮಯಕ್ಕೆ ಸರಿಯಾಗಿ ಆಧಾರ್ ಕಾರ್ಡ್‍ನೊಂದಿಗೆ 5 ಸೆಟ್ ಬಯೋಡಾಟಾದೊಂದಿಗೆ ಭಾಗವಹಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 63615 50016, 08192 259446 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications