ಆಗಸ್ಟ್‌ 10ರಂದು ಉಡುಪಿ, ಕೊಪ್ಪಳದಲ್ಲಿ ನೇರ ಸಂದರ್ಶನ

ಉಡುಪಿ, ಆಗಸ್ಟ್ 08; ಉದ್ಯೋಗ ಹುಡುಕುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿ. ಉಡುಪಿ ಮತ್ತು ಕೊಪ್ಪಳದಲ್ಲಿ ಆಗಸ್ಟ್ 10ರ ಗುರುವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಉಡುಪಿ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10ರ ಬೆಳಗ್ಗೆ 10.30ರಿಂದ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

walk-in-interview-on-august-10

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನ; ಶಾಂತ ಎಲೆಕ್ಟ್ರಿಕಲ್ಸ್ ಪ್ರೈ. ಲಿ, ಆಭರಣ ಜುವೆಲರ್ಸ್ ಬಳಿ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಿ. ಕರೆ ಮಾಡಲು ದೂರವಾಣಿ ಸಂಖ್ಯೆ 8105618291, 9945856670, 8105774936 ಹಾಗೂ 9901472710.

ಕೊಪ್ಪಳದಲ್ಲಿ ಕ್ಯಾಂಪಸ್ ಸಂದರ್ಶನ; ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ ಹಾಗೂ ಪ್ರತಿಷ್ಠಿತ ಕಂಪನಿಯಾದ ಮೆ. ಇಂಡೋ-ಎಂಐಎಂ ಪ್ರೈ.ಲಿ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ, ಬೆಂಗಳೂರು ವತಿಯಿಂದ ಶಿಶಿಕ್ಷು ತರಬೇತಿಗೆ ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ.

ಆಗಸ್ಟ್ 10ರ ಬೆಳಗ್ಗೆ 9ಕ್ಕೆ ಕುಷ್ಟಗಿ ರಸ್ತೆಯಲ್ಲಿರುವ ಟಣಕನಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಐಟಿಐ ಪಾಸ್ ಆದ ಹಾಗೂ ಪ್ರಸ್ತುತ ಅಂತಿಮ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರು ಪಾಲ್ಗೊಳ್ಳಬಹುದು.

ಐಟಿಐನ ಫಿಟ್ಟರ್, ಟರ್ನರ್, ಮಷಿನಿಷ್ಟ್, ಎಲೆಕ್ಟ್ರಾನಿಕ್ಸ್ ಮೆಕಾನಿಕ್ & ವೇಲ್ಡರ್ ವೃತ್ತಿಗಳ ಅಭ್ಯರ್ಥಿಗಳು ಶಿಶಿಕ್ಷು ತರಬೇತಿಯ (ಅಪ್ರೇಂಟಿಸ್‌ಶಿಪ್ ಟ್ರೈನಿಂಗ್) ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಬಹುದು.

ಆಸಕ್ತರು ತಮ್ಮ ಆಧಾರ್ ಕಾರ್ಡ್‌, ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ 2 ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಇವರನ್ನು ಸಂಪರ್ಕಿಸಬಹುದು.

ಕರೆ ಮಾಡಲು ಮೊಬೈಲ್ ಸಂಖ್ಯೆ 9008536895, 9448813422, 9742532353.

ಉಚಿತ ತರಬೇತಿ; ರುಡ್ಸೆಟ್ ಸಂಸ್ಥೆ ವತಿಯಿಂದ ಮೋಟಾರ್ ರಿವೈಂಡಿಂಗ್ & ಪಂಪ್ಸೆಟ್ ರಿಪೇರಿ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಕೆ ಮಾಡಬಹುದು.

ಆಸಕ್ತ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಿ, ಮೊಬೈಲ್‌ ಸಂಖ್ಯೆ 9740982585, 8884554510, 9241482541, 9113880324.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+