ಕೊಪ್ಪಳ; ಜುಲೈ 12ರಂದು ನೇರ ಸಂದರ್ಶನ, ಪ್ರವೇಶ ಉಚಿತ
ಕೊಪ್ಪಳ, ಜುಲೈ 10; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜುಲೈ 12ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಆಸಕ್ತರು ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ವಾಕ್ ಇನ್ ಇಂಟರ್‌ವ್ಯೂ ಜುಲೈ 12ರಂದು ಬೆಳಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ.

ಅಪೋಲೊ ಫಾರ್ಮಸಿ ಬೆಂಗಳೂರು ಮತ್ತು ನವಭಾರತ ಅಗ್ರೋ ಲಿಮಿಟೆಡ್ ಹುಬ್ಬಳ್ಳಿ ಇವರು ನೇರ ಸಂದರ್ಶನದಲ್ಲಿ ಪಾಲ್ಗೊಂಡು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ, ಎಲ್ಲರಿಗೂ ಪ್ರವೇಶ ಉಚಿತ.
ವಿದ್ಯಾರ್ಹತೆಯ ವಿವರಳು; ಈ ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಡಿ.ಫಾರ್ಮಸಿ, ಬಿ.ಫಾರ್ಮಸಿ ಮತ್ತು ಯಾವುದೇ ಪದವಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಭಾಗವಹಿಸುವ ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 26 ವರ್ಷಗಳು.
ಯುವಕರು ಮಾತ್ರ ಪಾಲ್ಗೊಳ್ಳಬಹುದಾಗಿದ್ದು, ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡ್‌ನ ಪ್ರತಿ, ರೆಸ್ಯೂಮ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ವಾಕ್ ಇನ್ ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08539-220859, 8105693234, 6361143422.
ಜುಲೈ 15ರಂದು ಉದ್ಯೋಗ ಮೇಳ; ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 15ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐಟಿಐ, ಡಿಪ್ಲೋಮಾ ಹಾಗೂ ಪದವೀಧರ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, 371 (ಜೆ) ಪ್ರಮಾಣಪತ್ರ ಹಾಗೂ 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ನೋಂದಣಿ ಮಾಡಿಕೊಳ್ಳಬೇಕು.
ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 14ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆ.ಎ.ಎಸ್. ಮತ್ತು ಕೆ.ಪಿ.ಎಸ್.ಸಿ. ಪರೀಕ್ಷಾರ್ಥಿಗಳಿಗೆ ಪರ್ಸನಾಲಿಟಿ ಡೆವಲಪ್‌ಮೆಂಟ್ ಹಾಗೂ ಸಾಫ್ಟ್‌ಸ್ಕಿಲ್ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರವನ್ನು ಸಹ ಆಯೋಜಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ. ಈ ಕಾರ್ಯಗಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು.












Click it and Unblock the Notifications