ಕಿಮ್ಸ್‌ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಕೊಪ್ಪಳ, ಏಪ್ರಿಲ್ 30 : ಕೊರೊನಾ ವಿರುದ್ಧ ಹೋರಾಟ ಮಾಡಲು ಕಿಮ್ಸ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ಭರ್ತಿಗೆ ಮೇ 6ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
Recommended Video
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಆರ್‌ಡಿಎಲ್ ಲ್ಯಾಬ್ ಸ್ಥಾಪನೆ ಮಾಡಲಾಗಿದೆ. ಲ್ಯಾಬ್ ನಿರ್ವಹಣೆಗಾಗಿ ರಿಸರ್ಚ್ ಅಸಿಸ್ಟೆಂಟ್ (ಮೆಡಿಕಲ್), ರಿಸರ್ಚ್ ಅಸಿಸ್ಟೆಂಟ್ (ನಾನ್-ಮೆಡಿಕಲ್), ರಿಸರ್ಚ್ ಅಸಿಸ್ಟೆಂಟ್, ಲ್ಯಾಬೊರೇಟರಿ ಟೆಕ್ನಿಷಿಯನ್ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ವೇತನವನ್ನು ಎಸ್‌ಡಿಆರ್‌ಎಫ್ ನಿಧಿಯಿಂದ ನೀಡಲಾಗುತ್ತದೆ. ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅಗತ್ಯವಾದ ಎಲ್ಲಾ ಮೂಲ ದಾಖಲಾತಿಗಳ ಜೊತೆಗೆ 2 ಸೆಟ್ ಝೆರಾಕ್ಸ್ ಪ್ರತಿಗಳು ಮತ್ತು 2 ಪಾಸ್‌ಪೋರ್ಟ್ ಅಳತೆಯ ಫೋಟೋ ತರಬೇಕು.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಮೇ. 5ರ ಸಂಜೆ 5ಗಂಟೆಯೊಳಗೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಮೇ. 6ರಂದು ನೇರ ಸಂದರ್ಶನಕ್ಕೆ ನಡೆಯಲಿದ್ದು, ಅಭ್ಯರ್ಥಿಗಳು ಬೆಳಗ್ಗೆ 9ಗಂಟೆಗೆ ಆಯ್ಕೆ ಸಮಿತಿ ಮುಂದೆ ಹಾಜರಾಗಬೇಕು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.











Click it and Unblock the Notifications