• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ; ಆಗಸ್ಟ್‌ 12ರಂದು ನೇರ ಸಂದರ್ಶನ

|
Google Oneindia Kannada News

ಕೊಪ್ಪಳ, ಆಗಸ್ಟ್ 07; ಕೊಪ್ಪಳದಲ್ಲಿ ಆಗಸ್ಟ್ 12ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ 10.30ರಿಂದ 3.30ರ ತನಕ ನೇರ ಸಂದರ್ಶನ ಆಯೋಜಿಸಲಾಗಿದೆ. ಕೊಪ್ಪಳದ ಸ್ಪಂದನಾ ಸ್ಫೂರ್ತಿ ಫೈನಾನ್ಷಿಯಲ್ ಲಿ. ಭಾಗವಹಿಸುತ್ತಿದೆ.

 ಐಟಿ ಉದ್ಯೋಗ ಸೃಷ್ಟಿಯಲ್ಲಿ ಹೈದರಾಬಾದ್ ಮೊದಲು: ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ? ಐಟಿ ಉದ್ಯೋಗ ಸೃಷ್ಟಿಯಲ್ಲಿ ಹೈದರಾಬಾದ್ ಮೊದಲು: ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ?

ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 18 ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ! ಬಿಎಸ್ಎಫ್ ಉದ್ಯೋಗ: PUC ಪಾಸಾದವರಿಗೆ 29200 ರೂ. ವೇತನ!

ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸ್ಟಾರ್ಟ್ಅಪ್ ಇಂಡಿಯಾ: ಉದ್ಯೋಗ ಸೃಷ್ಟಿಯಲ್ಲಿ ಹಿಂದೆ ಬಿದ್ದ ಕರ್ನಾಟಕ! ಸ್ಟಾರ್ಟ್ಅಪ್ ಇಂಡಿಯಾ: ಉದ್ಯೋಗ ಸೃಷ್ಟಿಯಲ್ಲಿ ಹಿಂದೆ ಬಿದ್ದ ಕರ್ನಾಟಕ!

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 7676151836, 9738933936, 08539-220859 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ತರಬೇತಿಗಾಗಿ ಅರ್ಜಿ ಆಹ್ವಾನ; ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್)ದ ವತಿಯಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವ ಆಯೋಜನೆ ಮಾಡಲಾಗಿದೆ.

ಆಗಸ್ಟ್ 3ನೇ ವಾರದಲ್ಲಿ ತರಬೇತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಂದು ಸಿಡಾಕ್‍ನ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 20. ಅಭ್ಯರ್ಥಿಗಳು 18 ವರ್ಷದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ ಬರೆಯಲು ತಿಳಿದಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿಯನ್ನು ಸಿಡಾಕ್‍ನ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 7483538942/ 9449226221.

ವಿದೇಶದಲ್ಲಿ ಉದ್ಯೋಗಾವಕಾಶ; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಉದಯೋನ್ಮುಖ ಯೋಜನೆಯಾದ ಅಂತರಾಷ್ಟ್ರೀಯ ವಲಸೆ ಕೇಂದ್ರ ಕರ್ನಾಟಕ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದರಲ್ಲಿ ಉದ್ಯೋಗಾವಕಾಶಕ್ಕೆ ಉಚಿತ ನೇಮಕಾತಿ ಮಾಡಲಾಗುತ್ತಿದೆ.

ಟೈಲ್ಸ್ ಮೇಸ್ತ್ರಿ ಹುದ್ದೆ (ಸಂಖ್ಯೆ 100) ಹಾಗೂ ಮಾರ್ಬಲ್ ಮೇಸ್ತ್ರಿ (100 ಹುದ್ದೆ) ನೇಮಕಾತಿ ಮಾಡಿಕೊಳ್ಳಲಾಗುವುದು. ಎರಡು ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿದವರಿಗೆ ವೇತನ 1000 -1200 ಯುಎಇ ದಿರ್ಹಾಮ್ (ಭಾರತೀಯ ಕರೆನ್ಸಿಯಲ್ಲಿ ರೂ.21,720-26,064), ಹೊಸಬರಿಗೆ ವೇತನ 850-950 ಯುಎಇ ದಿರ್ಹಾಮ್ (ಭಾರತೀಯ ಕರೆನ್ಸಿಯಲ್ಲಿ ರೂ.18,462-20,634).

2 ವರ್ಷಕ್ಕಿಂತ ಹೆಚ್ಚು ಅನುಭವ ಉಳ್ಳವರಿಗೆ 24 ರಿಂದ 32 ವರ್ಷ ಹೊಂದಿರಬೇಕು. ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ 18 ರಿಂದ 23ವರ್ಷ ತುಂಬಿರಬೇಕು.

ಗುಲಬರ್ಗಾ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಪೈ.ಲೀ, ಕೆಐಎಡಿಬಿ ಕೈಗಾರಿಕಾ ಪ್ರದೇಶ, 2ನೇ ಹಂತ, ಬೆಳ್ಳುರು ಕ್ರಾಸ್ ಸಮೀಪ, ಮೈಲಾರ ಲಿಂಗ ದಾಲ್ ಮಿಲ್ ಕಂಪೌಂಡ್, ಕಲಬುರಗಿ-585104. ಹೆಚ್ಚಿನ ಮಾಹಿತಿಗಾಗಿ 8217607423, 8310100754, 9113505020 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಬೀದರ್‌ನಲ್ಲಿ ಸೇನಾ ನೇಮಕಾತಿ; ಬೆಂಗಳೂರಿನ ನೇಮಕಾತಿ ವಲಯದ ಪ್ರಧಾನ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಬೀದರ್‌ನ ನೆಹರು ಸ್ಟೇಡಿಯಂನಲ್ಲಿ 2022ರ ಡಿಸೆಂಬರ್ 5 ರಿಂದ 22ರ ವರೆಗೆ ಅಗ್ನಿಪಥ್ ನೇಮಕಾತಿ ನಡೆಯಲಿದೆ.

ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮನ್ 10ನೇ ತರಗತಿ ತೇರ್ಗಡೆ, ಅಗ್ನಿವೀರ್ ಟ್ರೇಡ್ಸ್‍ಮೆನ್ 8ನೇ ತರಗತಿ ತೇರ್ಗಡೆ, ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ಲಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.

ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 3ರ ವರೆಗೆ joinindianarmy.nic.in ವೆಬ್‍ಸೈಟ್‍ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

English summary
Koppal district employment exchange office organized walk in interview on August 12th. 18 to 27 year old candidates can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X