ಕೊಪ್ಪಳ; ಆಗಸ್ಟ್ 4ರಂದು ವಾಕ್ ಇನ್ ಸಂದರ್ಶನ, ಪ್ರವೇಶ ಉಚಿತ

ಕೊಪ್ಪಳ, ಆಗಸ್ಟ್ 02; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಆಗಸ್ಟ್‌ 4ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಇದರಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ, ಎಲ್ಲರಿಗೂ ಪ್ರವೇಶ ಉಚಿತವಾಗಿರುತ್ತದೆ.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್‌ 4ರ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2.30ರ ತನಕ ವಾಕ್ ಇನ್ ಸಂದರ್ಶನ ನಡೆಯಲಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಲಾಗಿದೆ.

walk-in-interview-at-koppal

ಯಾವ ಕಂಪನಿಗಳು ಭಾಗಿ; ಈ ನೇರ ಸಂದರ್ಶನದಲ್ಲಿ ಗುರುಕುಲ ಸಾಫ್ಟ್‌ವೇರ್ ಸಲ್ಯೂಷನ್ ಪ್ರೈ, ಕೊಪ್ಪಳ ಮತ್ತು ಎನ್.ಒ.ಸಿ. ಪ್ರೈಲಿ ಕೊಪ್ಪಳ ಇವರು ಪಾಲ್ಗೊಳ್ಳಲಿದ್ದಾರೆ. ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಪಿಯುಸಿ ಮತ್ತು ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಹ ವಯೋಮಿತಿ, ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್‌ನ ಪ್ರತಿ, ರೆಸ್ಯೂಮ್ ಹಾಗೂ ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539-220859, 8105693234, 6361143422.

ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ; ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗ ಕೇಂದ್ರದಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸಿಗೆ ಪಿಯುಸಿ (ವಿಜ್ಞಾನ) ಹಾಗೂ ಐಟಿಐ (ಫಿಟ್ಟರ್, ಟರ್ನರ್ & ಮಷಿನಿಸ್ಟ್) ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 8 ಕಡೆಯ ದಿನವಾಗಿದೆ. ಈ ಕೋರ್ಸ್ ಶೇ.100 ಉದ್ಯೋಗಾವಕಾಶವನ್ನು ಹೊಂದಿದ್ದು, ಈ ಕೋರ್ಸ್ ಮುಗಿಸಿದ ಕೂಡಲೇ ಉದ್ಯೋಗ ದೊರಕುತ್ತದೆ ಹಾಗೂ ವ್ಯಾಸಂಗಕ್ಕೆ ಸಹಕಾರಿಯಾಗಿದೆ. ಸುಸಜ್ಜಿತವಾದ ಬಾಲಕರ ವಸತಿ ನಿಲಯದ ವ್ಯವಸ್ಥೆಯೂ ಇದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಘಟಕದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮಗ್ಗ ಇವರನ್ನು ಸಂಪರ್ಕಿಸಬಹುದು.

ಕರೆ ಮಾಡಲು ದೂರವಾಣಿ ಸಂಖ್ಯೆ 9448307027, 9880141054, 9902232839, 9449286543.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+