ಕೊಪ್ಪಳ; ಡಿಸೆಂಬರ್ 16ರಂದು ವಾಕ್ ಇನ್ ಇಂಟರ್ ವ್ಯೂ
ಕೊಪ್ಪಳ, ಡಿಸೆಂಬರ್ 15; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 16ರ ಶನಿವಾರ ವಾಕ್ ಇನ್ ಇಂಟರ್ ವ್ಯೂ ಆಯೋಜನೆ ಮಾಡಿದೆ. ಅಭ್ಯರ್ಥಿಗಳು ಪಾಲ್ಗೊಳ್ಳಲು ಯಾವುದೇ ಯಾವುದೇ ಶುಲ್ಕ ಇರುವುದಿಲ್ಲ, ಪ್ರವೇಶ ಉಚಿತ.
ಡಿಸೆಂಬರ್ 16 ರಂದು ಬೆಳಗ್ಗೆ 10.30 ಗಂಟೆಗೆ ಬೆಳಕು ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ & ಟೆಕ್ನಾಲಜಿ, 2ನೇ ಮಹಡಿ, ವಾಸುದೇವ ವರ್ಣೇಕರ್ ಕಾಂಪ್ಲೆಕ್ಸ್, ಬಸ್‌ಸ್ಟ್ಯಾಂಡ್ ಎದುರು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ.

ಈ ವಾಕ್ ಇನ್ ಇಂಟರ್ ವ್ಯೂನಲ್ಲಿ ವಿವಿಧ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಲಿದ್ದಾರೆ.
ವಾಕ್ ಇನ್ ಇಂಟರ್ ವ್ಯೂನಲ್ಲಿ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಪಿಯುಸಿ/ ತತ್ಸಮಾನ, ಐಟಿಐ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8105693234.
ರಾಷ್ಟ್ರೀಯ ಶಿಶಿಕ್ಷು ಮೇಳ; ಬಳ್ಳಾರಿಯ ವಿಠಲಾಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 18ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಶಿಶಿಕ್ಷು ಮೇಳ ಏರ್ಪಡಿಸಲಾಗಿದೆ.
ಈ ಮೇಳದಲ್ಲಿ ವಿವಿಧ ಉದ್ಯಮದವರು ಪಾಲ್ಗೊಳ್ಳುತ್ತಿದ್ದು, ಐಟಿಐ ಪಾಸಾದ ಮತ್ತು ಅಂತಿಮ ವರ್ಷದ ಅಭ್ಯಾಸ ನಡೆಸುತ್ತಿರುವ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ (ಬಯೋಡೇಟಾ), ಇತ್ತಿಚಿನ ಭಾವಚಿತ್ರ, ಮೂಲದಾಖಲೆಗಳೊಂದಿಗೆ ಶಿಶಿಕ್ಷು ಮೇಳದಲ್ಲಿ ಪಾಲ್ಗೊಳ್ಳಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9632069007, 9901737911, 7676161097 ಸಂಖ್ಯೆಗೆ ಕರೆ ಮಾಡಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಶೋಧಕರ ಹುದ್ದೆಗೆ ಸಂದರ್ಶನ; ಧಾರವಾಡ ಕೃಷಿ ಮಹಾವಿದ್ಯಾಲಯ, ಕೃಷಿ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಪ್ರಸಕ್ತ ಸಾಲಿಗೆ ಸಹ ಸಂಶೋಧಕರ ಮತ್ತು ಕಿರಿಯ ಸಂಶೋಧಕರ ತಾತ್ಕಾಲಿಕ ಹುದ್ದೆಗೆ ಡಿಸೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ಆಯೋಜನೆ ಮಾಡಲಾಗಿದೆ.
ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ನಕಲು ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu. ಸಂಪರ್ಕಿಸಬಹುದೆಂದು ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications